ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲಾ ಕೋರ್ಟ್‌ ಕಾಮಗಾರಿ ಶೀಘ್ರ ಪೂರ್ಣ

ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ
Last Updated 15 ನವೆಂಬರ್ 2021, 16:57 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋಲಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದಲ್ಲಿ ಕೈಗೊಂಡಿರುವ ಮೂಲ ಸೌಕರ್ಯ ಕಾಮಗಾರಿಯನ್ನು ಇದೇ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು’ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ತಿಳಿಸಿದೆ.

’ಶಿಥಿಲಗೊಂಡಿರುವ ಕೋಲಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಟ್ಟಡಗಳನ್ನು ತೆರವುಗೊಳಿಸಿ ಹೊಸದಾಗಿ ಕೋರ್ಟ್ ಕಟ್ಟಡ ನಿರ್ಮಾಣ ಮಾಡಲು ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ವಕೀಲರಾದ ವಿ.ವೆಂಕಟಾಚಲ ಗೌಡ, ಸೊಣ್ಣೇಗೌಡ ಮತ್ತು ಮುನಿರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ ಅವಸ್ಥಿ ನೇತೃತ್ವದ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲರು, ನ್ಯಾಯಾಲಯದ ಸಂಕೀರ್ಣದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗಾಗಿ ಈಗಾಗಲೇ ಐದು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಎಲ್ಲ ಕಾಮಗಾರಿಗಳನ್ನು ಇದೇ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ನ್ಯಾಯಪೀಠಕ್ಕೆ ವಿವರಣೆ ನೀಡಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಕಾಮಗಾರಿ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿ 2022ರ ಫೆಬ್ರುವರಿಗೆ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT