ಶಿಡ್ಲಘಟ್ಟ/ಚಿಂತಾಮಣಿ/ಬಾಗೇಪಲ್ಲಿ: ಜಂಗಮಕೋಟೆ ಭಾಗದ ನಮ್ಮ ಜಮೀನನ್ನು ಕೆಐಎಡಿಬಿಗೆ ಕೊಡಲು ನಾವು ಸಿದ್ಧರಿದ್ದು, ಕಳೆದ 72 ದಿನಗಳಿಂದಲೂ ಜಿಲ್ಲಾಡಳಿತ ಭವನದ ಆವರಣದಲ್ಲಿ ಅನಿರ್ದಿಷ್ಟ ಅವಧಿಯ ಧರಣಿ ನಡೆಸುತ್ತಿದ್ದರೂ ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ ಸ್ಪಂದಿಸುತ್ತಿಲ್ಲ ಎಂದು ಸಾಮೂಹಿಕ ನಾಯಕತ್ವ ರೈತ ಸಂಘದ ಮುಖಂಡ ಮುನಿಕೆಂಪಣ್ಣ ದೂರಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಅಲ್ಲಿನ ಫಲವತ್ತಾದ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲಾಗಿದೆ. ಇನ್ನುಳಿದಂತೆ ಇರುವ ಬಂಜರು ಭೂಮಿ, ಕೃಷಿ ನಡೆಸಲು ಅಷ್ಟಾಗಿ ಯೋಗ್ಯವಲ್ಲದ ಭೂಮಿ, ಸರ್ಕಾರಿ ಜಮೀನನ್ನು ಕೂಡಲೇ ಸ್ವಾಧೀನಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾಡಳಿತದಿಂದ ಸೂಕ್ತ ಸ್ಪಂದನ ಸಿಗದಿದ್ದರಿಂದ ಜೂನ್ 4ರಂದು ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಿಂದ ಅನಿರ್ದಿಷ್ಟ ಧರಣಿ ನಡೆಯುತ್ತಿರುವ ಜಿಲ್ಲಾಧಿಕಾರಿ ಕಚೇರಿವರೆಗೂ ಪಂಜಿನ ಮೆರವಣಿಗೆ ಹಮ್ಮಿಕೊಂಡಿದ್ದೇವೆ ಎಂದರು.

5ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದು ನಮ್ಮ ಬೇಡಿಕೆ ಈಡೇರುವವರೆಗೂ ಮುಂದುವರೆಸುತ್ತೇವೆ ಎಂದು ಹೇಳಿದರು.

ನಮಗೆ ಕೃಷಿ ಮಾಡಲು ಆಗದಂತಹ ಬಂಜರು ಭೂಮಿ ಇದೆ. ಅದರಿಂದ ನಾವು ಜೀವನ ನಡೆಸಲು ಸಾಧ್ಯವಿಲ್ಲದಂತಾಗಿದೆ. ಹಾಗಾಗಿ ನಾವು ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಗೆ ಭೂಮಿ ನೀಡಲು ಸಿದ್ಧ. ಇದರಿಂದ ನಮ್ಮ ಮಕ್ಕಳಿಗೆ ಉದ್ಯೋಗವಾದರೂ ಸಿಗಲಿದೆ. ಬದುಕನ್ನು ಕಟ್ಟಿಕೊಳ್ಳುತ್ತೇವೆ ಎಂದು ತಿಳಿಸಿದರು.

ಜಿಲ್ಲಾ ಯುವ ಘಟಕದ ಅಧ್ಯಕ್ಷ ಸುಬ್ರಮಣಿ ಮಾತನಾಡಿ, ನಾವು ನಮ್ಮ ಪಾಲಿನ ಬಂಜರು ಭೂಮಿಯನ್ನು ಕೆಐಎಡಿಬಿಗೆ ಬಿಟ್ಟುಕೊಡಲು ಸಿದ್ದರಿದ್ದೇವೆ. ನಾವು ಫಲವತ್ತಾದ ಭೂಮಿಯನ್ನು ಬಿಡಿ ಎಂದು ಯಾರಿಗೂ ಬಲವಂತ ಮಾಡುತ್ತಿಲ್ಲ ಎಂದರು.

ನಮ್ಮ ಭೂಮಿಯನ್ನು ಕೆಐಎಡಿಬಿಗೆ ನೀಡಲು ಸಿದ್ಧವಿದ್ದು, 72 ದಿನಗಳಿಂದಲೂ ನಾವುಗಳೇ ₹50, ₹100 ಕೈಯಿಂದ ಹಾಕಿಕೊಂಡು ಪೆಂಡಾಲ್, ಖುರ್ಚಿ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದೇವೆ. ಯಾವ ಸಮಾಜ ಸೇವಕರಿಂದಲೂ ದೇಣಿಗೆ ಪಡೆದಿಲ್ಲ. ಸುಮ್ಮನೆ ನಮ್ಮ ಮೇಲೆ ವಿನಾಕಾರಣ ಆರೋಪ ಮಾಡಬಾರದು ಎಂದು ವಿರೋಧಿಗಳಿಗೆ ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ತಾಲ್ಲೂಕು ಅಧ್ಯಕ್ಷ ಮುನೇಗೌಡ, ಉಪಾಧ್ಯಕ್ಷ ಡಿ.ವಿ.ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷ ಹರೀಶ್, ಮುಖಂಡರಾದ ಆಂಜಿನಪ್ಪ, ಪ್ರಭುಗೌಡ, ನಾಗರಾಜ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-16-769483425

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.