ಚಿಂತಾಮಣಿ: ಚುನಾವಣಾ ಸಮಯದಲ್ಲಿ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರುವುದಾಗಿ ರೈತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 5ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸೀಕಲ್ ರಮಣಾರೆಡ್ಡಿ ತಿಳಿಸಿದರು.

ನಗರದಲ್ಲಿ ಸೋಮವಾರ ರೈತ ಸಂಘ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರೈತರಿಗೆ ಮಾರಕವಾದ ಭೂಸ್ವಾಧೀನ ಕಾಯ್ದೆಯನ್ನು ಕೇಂದ್ರ ಸರ್ಕಾರವು ವಾಪಸ್ ಪಡೆಯಿತು. ಅಂದು ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತಂದಿದ್ದು, ವಾಪಸ್ ಪಡೆಯಲಿಲ್ಲ. ಅಂದು ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ, ಅದು ಇನ್ನೂ ಈಡೇರಿಲ್ಲ’ ಎಂದ ಅಸಮಾಧಾನ ವ್ಯಕ್ತಪಡಿಸಿದರು.

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿ ರೈತ ಸಂಘ ಹಾಗೂ ಹಸಿರುಸೇನೆ( ಕೋಡಿಹಳ್ಳಿ ಚಂದ್ರಶೇಖರ್ ಬಣ) ನೇತೃತ್ವದಲ್ಲಿ ಜಿಲ್ಲೆಯಿಂದ 10 ಸಾವಿರ ರೈತರು ದ್ವಿಚಕ್ರವಾಹನಗಳಲ್ಲಿ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.

ಮುಖಂಡ ಎನ್.ಸಿ.ಆಂಜನೇಯರೆಡ್ಡಿ, ಹಾಲು ನಾರಾಯಣಸ್ವಾಮಿ, ಸಿದ್ದು ನಾರಾಯಣಸ್ವಾಮಿ, ಆನಂದರೆಡ್ಡಿ, ಗಂಜೂರು ನಾರಾಯಣಸ್ವಾಮಿ, ಎಂ.ಎಲ್.ಆಂಜನೇಯರೆಡ್ಡಿ, ಹೊಸವುಡ್ಯ ರೆಡ್ಡಪ್ಪ, ಕೆ.ವಿ.ವೆಂಕಟಸ್ವಾಮಿರೆಡ್ಡಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-16-1231233983

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.