ಗೌರಿಬಿದನೂರು: ನಗರದ ಹಿರೇಬಿದನೂರು ಬಳಿಯ ಅಂಗನವಾಡಿ ಮತ್ತು ಸರ್ಕಾರಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್. ಮಂಜುಳಾ ಶುಕ್ರವಾರ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ನಗರದಲ್ಲಿರುವ ಸ್ಥಳೀಯ ಆಡಳಿತದ ವ್ಯವಸ್ಥೆ ಸರಿ ಇದೆಯೇ, ಇಲ್ಲವೇ ಎಂಬ ಪರಿಶೀಲನೆಗೆ ಎಂದಿನಂತೆ ಭೇಟಿ ನೀಡಿದ್ದೇನೆ. ಹಿರೇಬಿದನೂರಿನ ಅಂಗನವಾಡಿಯಲ್ಲಿ ಮಕ್ಕಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಸರ್ಕಾರಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಸಮಾಲೋಚಿಸಿದ್ದೇನೆ ಎಂದರು.

ವಿದ್ಯಾರ್ಥಿ ನಿಲಯದಲ್ಲಿ ಗಂಭೀರ ಸಮಸ್ಯೆಗಳು ಕಂಡುಬಂದಿಲ್ಲ. ವಿದ್ಯಾರ್ಥಿನಿಯರಿಗೆ ಶಾಲೆ ಸ್ವಲ್ಪ ದೂರದಲ್ಲಿದೆ ಎಂಬುದನ್ನು ಹೊರತುಪಡಿಸಿ, ಬೇರೆ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ ಎಂದು ಹೇಳಿದರು.

ಈ ವೇಳೆ ಜಿಲ್ಲಾಧಿಕಾರಿ ಪ್ರಭು ಜಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ನವೀನ್ ಭಟ್, ಎ.ಸಿ. ಅಶ್ವಿನ್, ತಹಶೀಲ್ದಾರ್ ಅರವಿಂದ್ ಕೆ.ಎಂ, ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಕೆ. ಹೊನ್ನಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಕೆ.ಜಿ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-16-2045178875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.