ಗೌರಿಬಿದನೂರು: ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೇರಿಸುವುದರಿಂದ ಅವರ ಸಮಗ್ರ ಬೆಳವಣಿಗೆ ಕಾಣಬಹುದು ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಹೇಳಿದರು.

ತಾಲ್ಲೂಕಿನ ಕಸಬಾ ಹೋಬಳಿ ಇಡಗೂರು ಗ್ರಾಮದಲ್ಲಿ ಶನಿವಾರ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಸಮಗ್ರ ಬೆಳವಣಿಗೆ ಜೊತೆಗೆ ವ್ಯಕ್ತಿತ್ವ ವಿಕಸನ, ಪೌಷ್ಟಿಕ ಆಹಾರ, ಪ್ರಾಥಮಿಕ ಶಿಕ್ಷಣ ಹಾಗೂ ಸುರಕ್ಷಿತ ಆರೈಕೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳು ಪ್ರಮುಖ ಪಾತ್ರ ವಹಿಸಲಿವೆ. ಗರ್ಭಿಣಿ ಮತ್ತು ಬಾಣಂತಿಯರ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಿವೆ. ಇದರಿಂದ ಪಾಲಕರಿಗೆ ಸಹಾಯವಾಗುವ ಜತೆಗೆ ಸಮುದಾಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿವೆ. ಯೋಜನೆಯನ್ನು ಈ ನಿಟ್ಟಿನಲ್ಲಿ ಸರ್ಕಾರ ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ. ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರು ತಮ್ಮ ಜವಾಬ್ದಾರಿ ಮತ್ತು ಕರ್ತವ್ಯ ಪಾಲನೆ ಮಾಡುವ ಮೂಲಕ ಯೋಜನೆಯ ಘನತೆಯನ್ನು ಕಾಪಾಡಬೇಕು ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿಕುಮಾರ್ ಮಾತನಾಡಿ, ಅಂಗನವಾಡಿ ಕೇಂದ್ರಗಳು ಪ್ರಾಥಮಿಕ ಶಿಕ್ಷಣದ ಮೆಟ್ಟಿಲುಗಳಿದ್ದಂತೆ. ಮಕ್ಕಳಿಗೆ ಚಿಕ್ಕಂದಿನಿಂದಲೇ ಶಿಕ್ಷಣದ ಬಗ್ಗೆ ಆಸಕ್ತಿ ಬೆಳೆಸಿ ಬೌದ್ಧಿಕ ಬೆಳವಣಿಗೆಗೆ ಕಾರಣವಾಗಲಿವೆ. ಆದ್ದರಿಂದ ಪಾಲಕರು ತಪ್ಪದೆ ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೇರಿಸಬೇಕು ಎಂದರು.

ಅಂಗನವಾಡಿ ಕಾರ್ಯಕರ್ತೆ ಭಾರತಿ, ಸಹಾಯಕಿ ಪಾರಿಜಾತಮ್ಮ, ಮುಖಂಡ ಭೀಮನಹಳ್ಳಿ ಮಂಜುನಾಥ್, ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-16-1598107361

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.