ಶಿಡ್ಲಘಟ್ಟ: ತಾಲ್ಲೂಕಿನ ಗೊರಮಡಗು ಗ್ರಾಮದಲ್ಲಿ ಅಂಬೇಡ್ಕರ್ ಅವರ 135ನೇ ಹಾಗೂ ಬಾಬು ಜಗಜೀವನ್ ರಾಂ ಅವರ 119ನೇ ಜಯಂತ್ಯುತ್ಸವ ಪ್ರಯುಕ್ತ ಅಂಬೇಡ್ಕರ್ ಹಬ್ಬವಾಗಿ ಬುಧವಾರ ಆಚರಿಸಲಾಯಿತು.

ಎಆರ್ಎಂ ಪಿಯು ಕಾಲೇಜು ಪ್ರಾಂಶುಪಾಲ ಡಾ.ಕೆ. ಮೂರ್ತಿ ಸಾಮ್ರಾಟ್ ಮಾತನಾಡಿ, ‘ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಂ ಅವರು ಶೋಷಿತ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಲ್ಲಿ ಸಮಾಜದ ಎರಡು ಕಣ್ಣುಗಳಿದ್ದಂತೆ’ ಎಂದು ಪ್ರತಿಪಾದಿಸಿದರು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಶೋಷಿತ ಸಮುದಾಯಗಳಿಗೆ ಕಾನೂನಾತ್ಮಕ ಹಕ್ಕುಗಳು ಮತ್ತು ಆತ್ಮಗೌರವವನ್ನು ಸಂವಿಧಾನದ ಮೂಲಕ ದೊರಕಿಸಿಕೊಟ್ಟರೆ, ಬಾಬು ಜಗಜೀವನ ರಾಂ ಆಡಳಿತ ವ್ಯವಸ್ಥೆ ಒಳಗೆ ಉನ್ನತ ಹುದ್ದೆಗಳನ್ನು ಅಲಂಕರಿಸಿ, ತಳವರ್ಗದವರೂ ದೇಶದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಸಮಾನ ಪಾಲುದಾರರಾಗಬಲ್ಲರು ಎಂಬುದನ್ನು ಸಾಬೀತುಪಡಿಸಿದರು ಎಂದು ಹೇಳಿದರು.

ಅಂಬೇಡ್ಕರ್ ಅವರು ಶೋಷಣೆ ವಿರುದ್ಧ, ಸಮಾನತೆಗಾಗಿ ಹೋರಾಡಿದ ಮಹಾನ್ ಚೇತನ. ಅವರ ಜಯಂತಿಯನ್ನು ಗ್ರಾಮ ಮಟ್ಟದಲ್ಲಿ ಎಲ್ಲ ಸಮುದಾಯದವರು ಒಂದಾಗಿ ಆಚರಿಸುತ್ತಿರುವುದು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಮಹತ್ವದ ಹೆಜ್ಜೆ ಎಂದು ಹೇಳಿದರು.

ಮುಖ್ಯ ಭಾಷಣಕಾರ ಕವಿ ಜನನಾಗಪ್ಪ ಮಾತನಾಡಿ, ಬಾಲ್ಯದಲ್ಲಿ ಅಸ್ಪೃಶ್ಯತೆಯಂತಹ ಅಮಾನವೀಯ ನೋವು ಅನುಭವಿಸಿದರೂ ಅದನ್ನು ಧೈರ್ಯದಿಂದ ಎದುರಿಸಿ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ಸಾಧನೆ ದೊಡ್ಡದು ಎಂದು ಬಣ್ಣಿಸಿದರು.

ಗ್ರಾಮದ ಬೀದಿಗಳು ನೀಲಿ ಬಂಟಿಂಗ್ಸ್ಗಳಿಂದ ಕಂಗೊಳಿಸುತ್ತಿದ್ದವು. ಕಲಾತಂಡಗಳೊಂದಿಗೆ ತಮಟೆ ವಾದ್ಯಗಳು, ಕೀಲು ಕುದುರೆ ಹಾಗೂ ಗಾರಡಿ ಗೊಂಬೆಗಳ ಮೆರವಣಿಗೆ ಹಬ್ಬದ ಸಂಭ್ರಮ ಹೆಚ್ಚಿಸಿತು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೀಶ್ ಹಾಗೂ ಪಿಡಿಒ ಪವಿತ್ರ ಅವರು ಅಂಬೇಡ್ಕರ್ ಭಾವಚಿತ್ರದ ನಾಮಫಲಕದ ಮುಂದೆ ಕೇಕ್ ಕತ್ತರಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ಗ್ರಾಮದ ಜನರೆಲ್ಲಾ ಭಾಗವಹಿಸಿ ‘ಅಂಬೇಡ್ಕರ್ ಹಬ್ಬ’ವನ್ನು ಅದ್ದೂರಿಯಾಗಿ ಆಚರಿಸಿದರು.

ದೇವರ ಮಳ್ಳೂರು ಮಹೇಶ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಚಾರ್ವಿ ಡ್ಯಾನ್ಸ್ ಅಕಾಡೆಮಿ ವಿದ್ಯಾರ್ಥಿಗಳು ಮನಮೋಹಕ ನೃತ್ಯ ಪ್ರದರ್ಶನ ನೀಡಿದರು.

ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಡಿ.ಎಸ್.ಎಸ್ ನಾರಾಯಣಸ್ವಾಮಿ, ಕೆ. ರಾಮಾಂಜಿನಪ್ಪ, ಶಿಕ್ಷಕ ಶ್ರೀನಿವಾಸ್, ಗೋಪಾಲಗೌಡ, ವಕೀಲ ಭಾಸ್ಕರ್, ದೇವರ ಮಳ್ಳೂರು ಮಹೇಶ್, ಮೈತ್ರಿ ಲೋಕೇಶ್, ವಕೀಲ ನಾಗರಾಜ್, ಡಿಶ್ ಮಂಜುನಾಥ್, ವೆಂಟರೋಣಪ್ಪ, ಶ್ರೀನಿವಾಸ್, ಮುನಿ ನಾರಾಯಣಸ್ವಾಮಿ, ನರಸಿಂಹಪ್ಪ, ನಾರಾಯಣಸ್ವಾಮಿ, ಮುನಿಕೃಷ್ಣ, ನಾಗರಾಜಪ್ಪ, ಕೇಶವರೆಡ್ಡಿ ,ವೆಂಕಟೇಶ್, ರಾಜೇಶ್, ಪಿಳ್ಳ ಮಂಜುನಾಥ್, ಹಾಗೂ ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-16-1725579743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.