ಗೌರಿಬಿದನೂರು: ಗೌರಿಬಿದನೂರು ಸೇವಾ ಪ್ರತಿಷ್ಠಾನದ ವತಿಯಿಂದ ಬಂದಾರ್ಲಹಳ್ಳಿ ಗ್ರಾಮದ ಕೆರೆಯಲ್ಲಿ ಕೆರೆ ಪುನಃಶ್ಚೇತನ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿಯ ಬಿ.ಎನ್. ರಂಗನಾಥ್, ‘ರೈತರ ಹಿತದೃಷ್ಟಿಯಿಂದ ಕೆರೆಗಳ ಪುನಃಶ್ಚೇತನ ಕಾರ್ಯವು ಅತ್ಯಗತ್ಯ. ಈವರೆಗೆ 16 ಕೆರೆಗಳನ್ನು ಪುನಃಶ್ಚೇತನಗೊಳಿಸಲಾಗಿದೆ. ಕೆರೆಯ ಹೂಳೆತ್ತುವುದರಿಂದ ನೀರಿನ ಸಂಗ್ರಹ ಸಾಮರ್ಥ್ಯವು ಹೆಚ್ಚಾಗಿ, ಸುತ್ತಮುತ್ತಲಿನ ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸಲಿದೆ’ ಎಂದು ಹೇಳಿದರು.

ಇಲ್ಲಿನ ಕೆರೆ ಮಣ್ಣನ್ನು ರೈತರು ಜಮೀನುಗಳಿಗೆ ಬಳಸಿಕೊಳ್ಳಬೇಕು. ಇಂತಹ ಕಾರ್ಯಗಳಲ್ಲಿ ರಾಜಕೀಯ ಬೆರೆಸಬಾರದು ಎಂದು ಹೇಳಿದರು.

ಸೇವಾ ಪ್ರತಿಷ್ಠಾನದ ಅಧ್ಯಕ್ಷ ವೇಣುಗೋಪಾಲ್ ಮಾತನಾಡಿದರು.

ಇದೇ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಭವ್ಯಾ ರಂಗನಾಥ್, ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷ ಸಂಜೀವರೆಡ್ಡಿ, ಸದಸ್ಯರಾದ ನರಸಿಂಹರೆಡ್ಡಿ, ಸುರೇಶ್, ವಕೀಲ ಹರೀಶ್, ವರುಣ್ ಹಾಗೂ ರಾಮಕೃಷ್ಣ ರೆಡ್ಡಿ, ಶಂಕರ್, ಶಿವಾನಂದಪ್ಪ, ಬ್ರಹ್ಮೇಶ್, ಆದಿರೆಡ್ಡಿ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-16-580981084

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.