ಶಿಡ್ಲಘಟ್ಟ: ತಾಲ್ಲೂಕಿನ ಜಂಗಮಕೋಟೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ರೈತರಿಂದ ಬಲವಂತವಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಕೂಡಲೇ ಕೈಬಿಡಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ 33 ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯುತ್ತಿದೆ. ಆದರೆ, ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ, ಸ್ಥಳೀಯ ಜನಪ್ರತಿನಿಧಿಗಲು ಭೇಟಿ ನೀಡಿ ರೈತರ ಮನವಿ ಆಲಿಸದಿರುವುದು ದುರದೃಷ್ಟಕರ ಎಂದು ರೈತ ಮುಖಂಡ ಎನ್.ವಿ. ವೆಂಕಟೇಶ್ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗಾಗಿ ರೈತರ ಫಲವತ್ತಾದ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ರೈತ ಮುಖಂಡರು ಶುಕ್ರವಾರ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಈ ಹೋರಾಟ ಯಾರೊಬ್ಬರ ವಿರುದ್ಧವಲ್ಲ ಅಥವಾ ರಾಜಕೀಯ ಪ್ರೇರಿತವಲ್ಲ. ಪಕ್ಷಾತೀತವಾಗಿ ನಮ್ಮ ಭೂಮಿ ಉಳಿಸಿಕೊಡಿ ಎಂದು ಪ್ರತಿಭಟನೆ ಮಾಡುತ್ತಿದ್ದೇವೆ. ‘ನಮ್ಮ ಭೂಮಿ ನಮ್ಮ ಹಕ್ಕು’ ಎಂಬ ಘೋಷಣೆಯೊಂದಿಗೆ ರೈತರು ಸಂಘಟಿತರಾಗಿದ್ದಾರೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಭೂಮಿ ಉಳಿಸುವ ಅಗತ್ಯವಿದೆ. ನಾವು ಕೈಗಾರಿಕೆಗಳ ವಿರೋಧಿಗಳಲ್ಲ. ಕೃಷಿಗೆ ಯೋಗ್ಯವಲ್ಲದ ಭೂಮಿ ಗುರುತಿಸಿ ಕೈಗಾರಿಕೆಗಳನ್ನು ಸ್ಥಾಪಿಸಲು ನಮ್ಮ ತಕರಾರಿಲ್ಲ. ಫಲವತ್ತಾದ ಭೂಮಿಯಲ್ಲಿ ದ್ರಾಕ್ಷಿ, ಶುಂಠಿ, ಹಿಪ್ಪುನೇರಳೆ, ಕೋಸು, ಟೊಮೆಟೊ ಸೇರಿದಂತೆ ವಿವಿಧ ರೀತಿಯ ಹೂವುಗಳನ್ನು ಬೆಳೆಯುವ ಫಲವತ್ತಾದ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದು ತರವಲ್ಲ’ ಎಂದರು.

ರಿಯಲ್ ಎಸ್ಟೇಟ್ ಉದ್ಯಮಿಗಳು ತಮ್ಮ ಲಾಭಕ್ಕಾಗಿ ಹೋರಾಟ ನಡೆಸಲು ರೈತರಿಗೆ ಸಹಕಾರ ನೀಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಸರ್ಕಾರ ಈ ಕೂಡಲೇ ಈ ಭಾಗವನ್ನು ಶಾಶ್ವತ ಹಸಿರು ವಲಯ ಎಂದು ಘೋಷಿಸಲಿ ನಮ್ಮದೇನೂ ಅಭ್ಯಂತರವಿಲ್ಲ. ಜೀವನವಿಡೀ ಜಮೀನು ಯಾರಿಗೂ ಮಾರುವುದಿಲ್ಲ. ಬದಲಿಗೆ ಕೃಷಿ ಮಾಡಿಕೊಂಡೇ ಜೀವನ ನಡೆಸುತ್ತೇವೆ ಎಂದರು.

ಈ ವೇಳೆ ರೈತ ಮುಖಂಡ ಹೀರೆಬಲ್ಲ ಕೃಷ್ಣಪ್ಪ, ನರಸಿಂಹಮೂರ್ತಿ, ಅಶ್ವಥನಾರಾಯಣಗೌಡ, ನಡಪಿನಾಯಕನಹಳ್ಳಿ ಹೊಂಬೇಗೌಡ, ನಡಪಿನಾಯಕನಹಳ್ಳಿಅಜಿತ್, ದೇವರಾಜ್, ಮೋಹನ್, ಬಸವಪಟ್ಟಣ ವೆಂಕಟೇಶ್, ರಾಜಣ್ಣ, ಶಿವಶಂಕರ್ ಸೇರಿದಂತೆ ಜಂಗಮಕೋಟೆ ಕೆಐಎಡಿಬಿ ಭೂಸ್ವಾಧೀನ ವಿರೋಧಿ ರೈತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-16-1442938698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.