ಶಿಡ್ಲಘಟ್ಟ: ತಾಲ್ಲೂಕಿನ ಜಂಗಮಕೋಟೆಯ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಜೂನ್ 5ರ ಶುಕ್ರವಾರ ಬೆಂಗಳೂರು ವಿಧಾನಸೌಧ ಚಲೋ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದೇವೆ ಎಂದು ಮಾಜಿ ಶಾಸಕ ಎಂ.ರಾಜಣ್ಣ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 78 ದಿನಗಳಿಂದಲೂ ಜಿಲ್ಲಾಡಳಿತ ಭವನದ ಆವರಣದಲ್ಲಿ ಅನಿರ್ದಿಷ್ಟ ಅವಧಿ ಧರಣಿ ನಡೆಸುತ್ತಿದ್ದರೂ ರಾಜ್ಯ ಸರ್ಕಾರ, ಜಿಲ್ಲಾಡಳಿತದಿಂದ ಸೂಕ್ತ ಸ್ಪಂದನೆ ಸಿಗದ ಕಾರಣ ಜೂನ್ 5ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲು ಸಿದ್ಧತೆಗಳು ನಡೆದಿವೆ ಎಂದರು.

ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳ ರೈತರು, ರೈತ ಸಂಘಟನೆಗಳು ಹಾಗೂ ರೈತ ಪರ ಅನೇಕ ಸಂಘಟನೆಗಳು ಬೈಕ್ ರ್ಯಾಲಿಗೆ ಬೆಂಬಲ ವ್ಯಕ್ತಪಡಿಸಿ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಈಗಾಗಲೇ ಹಳ್ಳಿ ಹಳ್ಳಿ ಸುತ್ತಿ ಕರಪತ್ರ ಹಂಚಿ ವ್ಯಾಪಕ ಪ್ರಚಾರ ನಡೆಸಲಾಗಿದೆ. ಉತ್ತಮ ಪ್ರತಿಕ್ರಿಯೆ ಮತ್ತು ಬೆಂಬಲ ವ್ಯಕ್ತವಾಗಿದ್ದು ಸುಮಾರು 3 ಸಾವಿರ ಬೈಕ್ಗಳಲ್ಲಿ ರೈತರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಿಂದ ಬೆಂಗಳೂರು ವಿಧಾನಸೌಧಕ್ಕೆ ಬೈಕ್ ರ್ಯಾಲಿಯಲ್ಲಿ ಹೆಚ್ಚಿನ ರೈತರು ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.

ನಾವು ಯಾರೂ ಕೂಡ ಕೈಗಾರಿಕೆಗಳ ವಿರೋಧಿಗಳಲ್ಲ. ಕೈಗಾರಿಕೆಗಳಿಂದ ಉದ್ಯೋಗ ಸೃಷ್ಟಿ ಆಗಲಿದೆ. ಇದರಿಂದ ಆರ್ಥಿಕ ಬೆಳವಣಿಗೆ ಆಗಲಿದೆ ಎಂಬುದು ಸತ್ಯ. ಆದರೆ ಫಲವತ್ತಾದ ಕೃಷಿ ಭೂಮಿ ಹೊರತುಪಡಿಸಿ, ಇತರೆ ಭಾಗದಲ್ಲಿ ಕೆಐಎಡಿಬಿ ಆಗಲಿ. ಜಿಲ್ಲಾಡಳಿತ, ತಾಲ್ಲೂಕು ಆಡಳಿತದ ಅಧಿಕಾರಿಗಳು, ಜನಪ್ರತಿನಿಧಿಗಳು ಕೂತು ಚರ್ಚಿಸಿ ಅಂತಿಮವಾಗಿ ಕೈಗಾರಿಕೆ ಪ್ರದೇಶದ ಅಭಿವೃದ್ಧಿ ಜಾಗ ಗುರುತಿಸಲಿ ನಮ್ಮದೇನು ತಕರಾರು ಇಲ್ಲ ಎಂದರು.

ರೈತ ಸಂಘದ ಮುಖಂಡ ದೊಣ್ಣಹಳ್ಳಿ ರಾಮಣ್ಣ ಮಾತನಾಡಿ, ಕೆಐಎಡಿಬಿ ವಿಚಾರದಲ್ಲಿ ಜೆಡಿಎಸ್ ದ್ವಂದ್ವ ನೀತಿ ಅನುಸರಿಸುತ್ತಿದೆ. ಬಿಡದಿಯಲ್ಲಿ ಕೈಗಾರಿಕೆಗಳಿಗೆ ಭೂಮಿ ಸ್ವಾಧೀನ ವಿರೋಧಿಸುತ್ತಿದ್ದಾರೆ. ಆದರೆ ಅವರದ್ದೇ ಪಕ್ಷದ ಕ್ಷೇತ್ರದ ಶಾಸಕರು ಶಿಡ್ಲಘಟ್ಟದಲ್ಲಿ ಕೆಐಎಡಿಬಿಗೆ ಜಮೀನು ಸ್ವಾಧೀನವನ್ನು ಸ್ವಾಗತಿಸುತ್ತಿದ್ದಾರೆ ಎಂದು ದೂರಿದರು.

ಜೆಡಿಎಸ್ ಮುಖಂಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೆಐಎಡಿಬಿ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ತಮ್ಮದೇ ಪಕ್ಷದ ಶಾಸಕರಿಗೂ ಅದೇ ನೀತಿ ನಿಯಮ ಅನ್ವಯವಾಗುವುದಾಗಿ ಹೇಳಬೇಕು ಎಂದು ಆಗ್ರಹಿಸಿದರು.

ಕೆಐಎಡಿಬಿ ಭೂಮಿ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಹೀರೆಬಲ್ಲ ಕೃಷ್ಣಪ್ಪ, ನಡಿಪಿನಾಯನಹಳ್ಳಿ ಅಜಿತ್ ಕುಮಾರ್, ಅಶ್ವತ್ಥನಾರಾಯಣಗೌಡ, ರಘು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-16-1449152826

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.