ಚಿಂತಾಮಣಿ: ತಾಲ್ಲೂಕಿನ ಯಾತ್ರಾಸ್ಥಳವಾದ ಕೈವಾರದಲ್ಲಿ ತ್ರಿಕಾಲಜ್ಞಾನಿ, ಸಂತ ಯೋಗಿ ನಾರೇಯಣ ತಾತಯ್ಯ ಅವರ 191ನೇ ಜೀವ ಸಮಾಧಿ ಪ್ರವೇಶ ಪರ್ವ ಆರಾಧನಾ ಮಹೋತ್ಸವವನ್ನು ಜೂನ್ 17ರಂದು ಆಚರಿಸಲಾಗುವುದು ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್. ಜಯರಾಂ ತಿಳಿಸಿದರು.

ಕೈವಾರದ ಯೋಗಿನಾರೇಯಣ ಮಠದ ಸದ್ಗುರು ಕೈವಾರ ತಾತಯ್ಯ ಸನ್ನಿಧಾನದಲ್ಲಿ ಶನಿವಾರ ಆರಾಧನಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದರು.

ಆರಾಧನೆ ಪರ್ವ ಮಹೋತ್ಸವದ ಪ್ರಾತಃಕಾಲ ಘಂಟಾನಾದ, ಸುಪ್ರಭಾತ, ಗೋಪೂಜೆಯೊಂದಿಗೆ ಪೂಜಾ ಕೈಂಕರ್ಯಗಳು ಆರಂಭವಾಗಲಿವೆ. ಬೆಳಗ್ಗೆ 8 ಗಂಟೆಗೆ ಸದ್ಗುರು ತಾತಯ್ಯನವರನ್ನು ಅಲಂಕೃತ ಪಲ್ಲಕ್ಕಿಯಲ್ಲಿ ಸಭಾಂಗಣಕ್ಕೆ ಕರೆತರಲಾಗುವುದು. ತಾತಯ್ಯಗೆ ವಿಶೇಷ ಅಭಿಷೇಕ, ಅಷ್ಟವಧಾನ ಸೇವೆ, ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಯೋಗಿನಾರೇಯಣ ಮಠದ ಟ್ರಸ್ಟ್ ಉಪಾಧ್ಯಕ್ಷ ಜೆ.ವಿಭಾಕರರೆಡ್ಡಿ, ಖಜಾಂಚಿ ಆರ್.ಪಿ.ಎಂ. ಸತ್ಯನಾರಾಯಣ, ವಾನರಾಶಿ ಬಾಲಕೃಷ್ಣ ಭಾಗವತರ್, ಕೆ.ನರಸಿಂಹಪ್ಪ, ಕೆ.ಲಕ್ಷ್ಮಿನಾರಾಯಣ್, ಟಿ.ಎಲ್.ಆನಂದ್, ವೆಂಕಟರಮಣಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-16-1124639204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.