ಶಿಡ್ಲಘಟ್ಟ: ತಾಲ್ಲೂಕಿನ ಕುಂಬಿಗಾನಹಳ್ಳಿ (ಎಚ್.ಕ್ರಾಸ್) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಆಗಿ ಕಾಳನಾಯಕನಹಳ್ಳಿಯ ಕೆ.ಎಂ.ಭಿಮೇಶ್ ಹಾಗೂ ಉಪಾಧ್ಯಕ್ಷ ಆಗಿ ಟಿ.ಬುಸನಹಳ್ಳಿಯ ಸೋಮೇಶ್ ಅವಿರೋಧವಾಗಿ ಆಯ್ಕೆಯಾದರು.

ಚೀಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಬೇರ್ಪಟ್ಟು ಪ್ರತ್ಯೇಕವಾಗಿ ಅಸ್ತಿತ್ವಕ್ಕೆ ಬಂದ ಕುಂಬಿಗಾನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ಪದಾಧಿಕಾರಿಗಳ ಸ್ಥಾನಕ್ಕೆ ಸಹಕಾರ ಸಂಘದ ಕಚೇರಿಯಲ್ಲಿ ಬುಧವಾರ ಚುನಾವಣೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ.ಭಿಮೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೋಮೇಶ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಿಸಿದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು, ಅವರ ಬೆಂಬಲಿಗರು ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-16-1810686221

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.