ಶಿಡ್ಲಘಟ್ಟ: ಕಟ್ಟಡ ಮತ್ತು ಇತರೆ ನಿರ್ಮಾಣ ವಲಯದಲ್ಲಿ ತೊಡಗಿಸಿಕೊಂಡ ಕಾರ್ಮಿಕರಿಗೆ ಸರ್ಕಾರವು ಕಾರ್ಮಿಕ ಇಲಾಖೆ, ಕಾರ್ಮಿಕ ಮಂಡಳಿಯಿಂದ ಅನೇಕ ಸವಲತ್ತುಗಳನ್ನು ನೀಡಲಿದೆ. ಆದರೆ ಸಾಕಷ್ಟು ಮಂದಿಗೆ ಈ ಬಗ್ಗೆ ಅರಿವು ಇಲ್ಲದೆ ಸವಲತ್ತುಗಳನ್ನು ಪಡೆದುಕೊಳ್ಳಲು ಆಗುತ್ತಿಲ್ಲ ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಸಿ.ಎಸ್.ಸುಕನ್ಯ ಹೇಳಿದರು.

ಶಿಡ್ಲಘಟ್ಟ-ದಿಬ್ಬೂರಹಳ್ಳಿ ಮಾರ್ಗದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ನಡೆದ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಂಡಳಿಯಲ್ಲಿ ನೋಂದಾಯಿಸಿ ಕೊಂಡ ಕಟ್ಟಡ, ಇನ್ನಿತರೆ ನಿರ್ಮಾಣ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಟೂಲ್ ಕಿಟ್ ಸೌಲಭ್ಯ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ಮದುವೆಗೆ ಸಹಾಯಧನ ಸೇರಿದಂತೆ ಅನೇಕ ರೀತಿಯ ಸವಲತ್ತುಗಳು ಇವೆ. ಇವೆಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಟ್ಟಡ ಇನ್ನಿತರೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರಬೇಕು. ಮಂಡಳಿಯಲ್ಲಿ ಹೆಸರು ನೋಂದಾಯಿಸಿಕೊಂಡಿರಬೇಕು ಎಂದು ಹೇಳಿದರು.

ಕಾರ್ಮಿಕ ಇಲಾಖೆಯಿಂದ ಮಂಡಳಿಯಲ್ಲಿ ನೋಂದಾಯಿತಿ ಕಾರ್ಮಿಕರಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು. ಸರ್ಕಾರಿ ಸಹಾಯಕ ಅಭಿಯೋಜಕಿ ರೂಪ, ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ವಕೀಲ ರಘುಗೌಡ, ರಾಮಕೃಷ್ಣ, ಕಾರ್ಮಿಕ ಇಲಾಖೆಯ ನವೀನ್ ಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-16-2021577681

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.