ಚಿಂತಾಮಣಿ: ಸರ್ಕಾರದ ಪರವಾನಗಿ ಪಡೆದ ಭೂಮಾಪಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಲ್ಲದಿದ್ದರೆ, ರೈತರಿಗೆ ಸರ್ಕಾರವು ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ರೈತ ಸಂಘ ಆಗ್ರಹಿಸಿದೆ.

ರೈತ ಸಂಘದ ವಲಯ ವಿಭಾಗದ ಅಧ್ಯಕ್ಷ ರಘುನಾಥರೆಡ್ಡಿ ಮಾತನಾಡಿ, ‘ಸರ್ಕಾರಿ ಪರವಾನಗಿ ಪಡೆದ ಭೂಮಾಪಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ 3 ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ತಾಲ್ಲೂಕು ಭೂಮಾಪನ ಲಾಖೆಯು ಬಹುತೇಕ ಸ್ತಬ್ಧವಾಗಿದ್ದು, ರೈತರು ತಮ್ಮ ಜಮೀನುಗಳ ಸರ್ವೆ ಸೇರಿದಂತೆ ಇನ್ನಿತರ ಕಾರ್ಯಗಳಿಗಾಗಿ ಕಚೇರಿಗೆ ಅಲೆದಾಡಿ ಸುಸ್ತಾಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸರ್ವೆ, ಪೋಡಿ, ದರಖಾಸ್ತಿ ಸೇರಿ ಮತ್ತಿತರ ಸುಮಾರು 3,500 ಅರ್ಜಿಗಳು ಬಾಕಿ ಉಳಿದಿವೆ. ದಿನೇ ದಿನೇ ಅರ್ಜಿಗಳ ಸಂಖ್ಯೆ ಹೆಚ್ಚಾಗುತ್ತಿವೆ. ಭೂಮಾಪಕರು ವಿವಿಧ ಬೇಡಿಕೆಗಳಿಗಾಗಿ ಫೆಬ್ರುವರಿ 20ರಿಂದ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ನಡೆಸುತ್ತಿದ್ದಾರೆ ಎಂದರು.

ಕಚೇರಿಯಲ್ಲಿ ಕೇವಲ ಇಬ್ಬರು ಸರ್ಕಾರಿ ಭೂಮಾಪಕರಿದ್ದು, ಎಲ್ಲ ಕೆಲಸಗಳನ್ನು ನಿರ್ವಹಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ಈ ನಡುವೆ ಸರ್ವರ್ ಸಮಸ್ಯೆಯೂ ಕಾಡುತ್ತಿದೆ. ರೈತರು ಸರ್ವೆ, ಹದ್ದುಬಸ್ತು, ಪೋಡಿ, 11 ಇ ನಕ್ಷೆ, ದಾರಿ ನಕ್ಷೆ ಸೇರಿದಂತೆ ಕಾನೂನು ತೊಡಕುಗಳನ್ನು ನಿವಾರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪೌತಿ ಖಾತೆ, ಪಹಣಿ, ಜಮೀನು ವಿಭಾಗ, ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಳ್ಳಲಾಗದೆ ಪರದಾಡುತ್ತಿದ್ದಾರೆ. ಹೀಗಾಗಿ ಜಮೀನು, ನಿವೇಶನ ಖರೀದಿ, ಹಕ್ಕು ಬದಲಾವಣೆಗೆ ತೊಡಕು ಉಂಟಾಗಿದೆ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-16-1932490285

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.