ಶಿಡ್ಲಘಟ್ಟ: ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ ಗ್ರಾಮದೇವತೆಗಳ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ವಿಜೃಂಭಣೆಯಿಂದ ತಂಬಿಟ್ಟಿನ ದೀಪೋತ್ಸವ ನೆರವೇರಿಸಲಾಯಿತು.

ತಾಲ್ಲೂಕಿನ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಮೇಲೂರಿನ ಗಂಗಾದೇವಿ ರಥೋತ್ಸವದ ಅಂಗವಾಗಿ ನಡೆಯುವ ದೀಪೋತ್ಸವಗಳು ಈ ಹಿಂದೆ ಒಂದೊಂದು ಸಮುದಾಯದವರು ಒಂದೊಂದು ದಿನ ಆಚರಿಸುತ್ತಿದ್ದರು. 25 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮಳ್ಳೂರು ಗ್ರಾಮಸ್ಥರೆಲ್ಲರೂ ಜಾತಿ, ಮತ, ಬೇಧವಿಲ್ಲದೆ ಒಂದಾಗಿ ಅದ್ದೂರಿಯಾಗಿ ಜಾತ್ರೆಯಲ್ಲಿ ಪಾಲ್ಗೊಂಡರು.

ನೂರಾರು ಹೆಣ್ಣು ಮಕ್ಕಳು, ಮಹಿಳೆಯರು ತಂಬಿಟ್ಟು ದೀಪಗಳನ್ನು ವಿವಿಧ ಬಗೆಯ ಅಲಂಕಾರಿಕ ಹೂವಿನಬುಟ್ಟಿಗಳಲ್ಲಿ ಇಟ್ಟುಕೊಂಡು ಮಳ್ಳೂರಿನಿಂದ ಮೇಲೂರಿಗೆ ಮೆರವಣಿಗೆ ಮೂಲಕ ತೆರಳಿ ಮೇಲೂರಿನ ಗ್ರಾಮದೇವತೆ ಗಂಗಾದೇವಿಗೆ ಬೆಳಗಿದರು.

ಗ್ರಾಮದ ಬೀದಿಗಳಲ್ಲಿ ತಳಿರು ತೋರಣ ಕಟ್ಟಿ, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.

ಬೃಹತ್ ಗಾತ್ರದ ಸ್ವಾಗತ ಕಮಾನುಗಳು ತಲೆ ಎತ್ತಿ ನಿಂತಿದ್ದವು. ತಮಟೆ ವಾದನಗಳಿಗೆ ಗ್ರಾಮದ ಯುವಕರು ಹೆಜ್ಜೆ ಹಾಕಿದರು.

ಗ್ರಾಮದಲ್ಲಿ ಹಬ್ಬದ ವಾತಾವರಣ ಏರ್ಪಡುವುದರ ಜೊತೆಗೆ, ದೂರದ ಊರುಗಳಿಂದ ಬಂದಿದ್ದ ನೆಂಟರಿಷ್ಟರಿಂದಾಗಿ ಮನೆಗಳಲ್ಲಿ ಸಂಭ್ರಮ ಏರ್ಪಟ್ಟಿತ್ತು.

ದೀಪೋತ್ಸವದ ಅಂಗವಾಗಿ ಗ್ರಾಮದಲ್ಲಿ ಮಾಂಸಾಹಾರದ ಘಮಲು ಮುಗಿಲು ಮುಟ್ಟಿತ್ತು. ಗಂಗಾದೇವಿಯ ದೀಪೋತ್ಸವ ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-16-334553592

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.