ಚಿಂತಾಮಣಿ: ತಾಲ್ಲೂಕಿನ ಕೈವಾರ ಹೋಬಳಿಯ ಮಸ್ತೇನಹಳ್ಳಿಯ ಕೈಗಾರಿಕಾ ಪ್ರಾಂಗಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಭೇಟಿ ನೀಡಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಮೂಲ ಸೌಲಭ್ಯಗಳ ಪರಿಶೀಲನೆ ನಡೆಸಿದರು.

ಈಗಾಗಲೇ ಆರಂಭವಾದ ಕೈಗಾರಿಕಾ ಸ್ಥಳಗಳಿಗೆ ಭೇಟಿ ನೀಡಿ ಮಾಲೀಕರೊಂದಿಗೆ ಮಾತುಕತೆ ನಡೆಸಿ, ಅವರ ಅಹವಾಲುಗಳನ್ನು ಆಲಿಸಿದರು. ಅಧಿಕಾರಿಗಳೊಂದಿಗೂ ಚರ್ಚೆ ನಡೆಸಿ ಅಗತ್ಯ ಸೌಲಭ್ಯ ಒದಗಿಸಿಕೊಡುವಂತೆ ಸೂಚಿಸಿದರು.

ಕ್ಷೇತ್ರದ ಯುವಜನರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಬೇಕು ಮತ್ತು ಆರ್ಥಿಕವಾಗಿ ಬಲತುಂಬಬೇಕು ಎನ್ನುವ ನಿಟ್ಟಿನಲ್ಲಿ ಕೈಗಾರಿಕಾ ಪ್ರಾಂಗಣ ಸ್ಥಾಪಿಸಲಾಗಿದೆ. ರೈತರಿಂದ ಪಡೆದ ಜಮೀನುಗಳನ್ನು ಖಾಲಿ ಬಿಡುವುದು ಒಳ್ಳೆಯದಲ್ಲ. ಕೈಗಾರಿಕೆಗಳನ್ನು ಸ್ಥಾಪಿಸಲು ಜಮೀನು ಪಡೆದುಕೊಂಡವರು ಆದಷ್ಟು ಬೇಗ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದು ಹೇಳಿದರು.

ಕೈಗಾರಿಕೆಗಳ ಉತ್ಪಾದನೆ, ತಂತ್ರಜ್ಞಾನ, ಮಾರುಕಟ್ಟೆ ವ್ಯವಸ್ಥೆ, ಕಾರ್ಮಿಕರಿಗೆ ಕಲ್ಪಿಸಲಾಗಿರುವ ಸೌಲಭ್ಯಗಳ ಕುರಿತು ಕಾರ್ಖಾನೆಗಳ ಆಡಳಿತ ಮಂಡಳಿಯೊಂದಿಗೆ ಚರ್ಚೆ ನಡೆಸಿದರು.

ಕೈಗಾರಿಕಾ ಪ್ರದೇಶಕ್ಕೆ ಅಗತ್ಯವಿರುವ ಹೆಚ್ಚುವರಿ ರಸ್ತೆ ಸಂಪರ್ಕ, ನಿರಂತರ ವಿದ್ಯುತ್ ಸರಬರಾಜು, ನೀರಾವರಿ ಸೌಲಭ್ಯಗಳ ಸುಧಾರಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು, ಆ ಪ್ರದೇಶದ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-16-941207112

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.