ಚೇಳೂರು: ಹಲವು ದಿನಗಳಿಂದ ನನೆಗುದಿಗೆ ಬಿದ್ದಿರುವ ಚೇಳೂರು ತಾಲ್ಲೂಕಿನ ನೂತನ ತಾಲ್ಲೂಕು ಕಚೇರಿ (ಮಿನಿ ವಿಧಾನಸೌಧ) ಕಟ್ಟಡ ನಿರ್ಮಾಣ ಕಾಮಗಾರಿಗೆ ಜುಲೈ ತಿಂಗಳಿನಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದ್ದಾರೆ.

ಆದರೆ, ಈ ಹಿಂದೆ ತೀವ್ರ ವಿರೋಧ ಹಾಗೂ ಪ್ರತಿಭಟನೆಗಳಿಗೆ ಕಾರಣವಾಗಿದ್ದ ಪುಲಗಲ್ ಕ್ರಾಸ್ನಲ್ಲೇ ಕಟ್ಟಡ ನಿರ್ಮಾಣ ಮಾಡುವುದಾಗಿ ಶಾಸಕ ತಿಳಿಸಿದ್ದು, ತಾಲ್ಲೂಕಿನಲ್ಲಿ ಮತ್ತೊಮ್ಮೆ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತಾಲ್ಲೂಕು ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಈಗಾಗಲೇ ಅಂತಿಮವಾಗಿ ಜಮೀನು ಗುರುತಿಸಲಾಗಿದ್ದು, ಕಟ್ಟಡದ ಆಕರ್ಷಕ ವಿನ್ಯಾಸವೂ (ಡಿಸೈನ್) ಸಿದ್ಧವಾಗಿದೆ. ಕೇವಲ ಕಾಮಗಾರಿ ಅನುಷ್ಠಾನ ಮಾತ್ರ ಬಾಕಿ ಇದ್ದು, ಶೀಘ್ರವೇ ಟೆಂಡರ್ ಪ್ರಕ್ರಿಯೆ ಕರೆಯಲಾಗುವುದು. ಸಾರ್ವಜನಿಕರು ಹಾಗೂ ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಬಂದು ಹೋಗಲು ಅನುಕೂಲವಾಗುವಂತೆ ಪುಲಗಲ್ ಕ್ರಾಸ್ನಲ್ಲಿ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಸುಮಾರು ₹12 ಕೋಟಿ ವೆಚ್ಚದಲ್ಲಿ ಸುಸಜ್ಜಿತ ತಾಲ್ಲೂಕು ಕಚೇರಿ ಕಟ್ಟಡವನ್ನು ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ.

ಈ ತಾಲ್ಲೂಕು ಕಚೇರಿ ಜಾಗದ ವಿವಾದವು ರಾಜಕೀಯ ಪಕ್ಷಗಳ ಮುಖಂಡರ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. ವಿವಿಧ ಪಕ್ಷಗಳ ಮುಖಂಡರು ಸಾಲು ಸಾಲಾಗಿ ಸುದ್ದಿಗೋಷ್ಠಿಗಳನ್ನು ನಡೆಸಿ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದರು. ಈ ವಿವಾದದ ಬಿಸಿ ಪಟ್ಟಣದಲ್ಲಿ ನಡೆದ ಶಾಸಕರ ಜನತಾ ದರ್ಶನ ಕಾರ್ಯಕ್ರಮಕ್ಕೂ ತಟ್ಟಿತ್ತು. ಸಾರ್ವಜನಿಕರು ಹಾಗೂ ಪ್ರತಿಭಟನಕಾರರು ಶಾಸಕರನ್ನು ನೇರವಾಗಿ ಪ್ರಶ್ನಿಸಿ ಜಾಗ ಬದಲಿಸುವಂತೆ ಪಟ್ಟು ಹಿಡಿದಿದ್ದರು. ಹೀಗಾಗಿ ಈ ಯೋಜನೆ ಬಹುತೇಕ ಕೈಬಿಡಲಾಗಬಹುದು ಅಥವಾ ಜಾಗ ಬದಲಾಗಬಹುದು ಎಂಬ ಊಹಾಪೋಹಗಳು ದಟ್ಟವಾಗಿದ್ದವು.

ಇಷ್ಟೆಲ್ಲ ವಿರೋಧ, ಪ್ರತಿಭಟನೆ ಮತ್ತು ರಾಜಕೀಯ ಒತ್ತಡಗಳ ನಡುವೆಯೂ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ಜುಲೈನಲ್ಲಿ ಪುಲಿಗಲ್ ಕ್ರಾಸ್ನಲ್ಲೇ ಭೂಮಿ ಪೂಜೆ ನೆರವೇರಿಸುವುದಾಗಿ ಪ್ರಕಟಿಸಿರುವುದು ಹೋರಾಟಗಾರರು ಮತ್ತು ವಿರೋಧ ಪಕ್ಷದ ನಾಯಕರಿಗೆ ಸವಾಲು ಹಾಕಿದಂತಿದೆ. ಶಾಸಕರ ಈ ಪ್ರಕಟಣೆಯು ಸದ್ಯ ತಾಲ್ಲೂಕಿನಲ್ಲಿ ತಣ್ಣಗಾಗಿದ್ದ ವಿವಾದದ ಕಿಚ್ಚಿಗೆ ಮತ್ತೆ ತುಪ್ಪ ಸುರಿದಂತಾಗಿದೆ.

ತಾಲ್ಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಸುಸಜ್ಜಿತ ಕಚೇರಿ ನಿರ್ಮಾಣ ಎಷ್ಟು ಮುಖ್ಯವೋ, ಅದು ಜನಸಾಮಾನ್ಯರಿಗೆ ತಲುಪುವಂತಿರಬೇಕು ಎಂಬುದು ಸಾರ್ವಜನಿಕರ ಆಶಯ. ಹೀಗಾಗಿ, ಶಾಸಕರ ಭೂಮಿ ಪೂಜೆಯ ನಿರ್ಧಾರಕ್ಕೆ ವಿರೋಧ ಪಕ್ಷಗಳು ಮತ್ತು ಹೋರಾಟಗಾರರು ಯಾವ ರೀತಿ ಪ್ರತಿಕ್ರಿಯಿಸಲಿದ್ದಾರೆ? ಚೇಳೂರಿನ ಬಹುನಿರೀಕ್ಷಿತ ತಾಲ್ಲೂಕು ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿ ಮುಂದಿನ ದಿನಗಳಲ್ಲಿ ಸುಸೂತ್ರವಾಗಿ ಸಾಗುತ್ತದೆಯೇ ಅಥವಾ ಮತ್ತೊಂದು ಸುತ್ತಿನ ಹೋರಾಟಕ್ಕೆ ನಾಂದಿ ಹಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-16-1014595348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.