ಚಿಂತಾಮಣಿ: ಮುರುಗುಮಲ್ಲ ಗ್ರಾಮದಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಳೆ ಆರ್ಭಟಕ್ಕೆ ದರ್ಗಾ ಮುಂಭಾಗದ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿತ್ತು.

ದರ್ಗಾದ ಮುಖ್ಯದ್ವಾರದ ಮುಂಭಾಗದ ರಸ್ತೆ ಮೊಣಕಾಲುದ್ದ ನೀರು ನಿಂತು ಕೆರೆಯಂತಾಗಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ಸಂಕಷ್ಟ ಎದುರಿಸುವಂತಾಯಿತು.

ಮಳೆ ಹೆಚ್ಚಾಗಿದ್ದರಿಂದ ರಸ್ತೆ ಬದಿಯ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚಲು ಪರದಾಡಿದರು. ಗ್ರಾಮದ ಒಳಚರಂಡಿ ವ್ಯವಸ್ಥೆಯ ಕೊರತೆಯಿಂದಾಗಿ ರಸ್ತೆಯ ಮೇಲೆ ಇಷ್ಟೊಂದು ಪ್ರಮಾಣದಲ್ಲಿ ನೀರು ನಿಲ್ಲಲು ಕಾರಣವಾಗಿದೆ. ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಸ್ಥಿತಿ ಮರುಕಳಿಸುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಎಚ್ಚೆತ್ತುಕೊಂಡು ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-18-1055475618

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.