ಚಿಂತಾಮಣಿ: ಜಿಲ್ಲೆಯಲ್ಲಿ ಕಂದಾಯ ಗ್ರಾಮ ಅಭಿಯಾನ ಯೋಜನೆಯಡಿ 1.4 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ.ಸುಧಾಕರ್ ತಿಳಿಸಿದರು.

ತಾಲ್ಲೂಕಿನ ಕೋಟಗಲ್ ಗ್ರಾಮದಲ್ಲಿ ಜಿಲ್ಲಾಡಳಿತವು ಆಯೋಜಿಸಿದ್ದ, “ವಿಶೇಷ ಕಂದಾಯ ಉಪ ಗ್ರಾಮಗಳ ರಚನೆ ಅಭಿಯಾನಕ್ಕೆ” ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕಂದಾಯ ಇಲಾಖೆಯಲ್ಲಿ ಮಹತ್ತರವಾದ ಯೋಜನೆಗಳು ಜಾರಿಗೆ ಬಂದಿವೆ. ವಿಶೇಷ ಕಂದಾಯ ಗ್ರಾಮ ಅಭಿಯಾನ 2.0 ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಜಾಗದಲ್ಲಿ ನಿರ್ಮಿಸಿರುವ ಅನಧಿಕೃತ ಮನೆಗಳನ್ನು ಗುರುತಿಸಿ ಶಾಶ್ವತ ಮಾಲೀಕತ್ವದ ಕಂದಾಯ ದಾಖಲೆ ವಿತರಿಸುವ ಭಾಗವಾಗಿ ಈಗಾಗಲೇ 1.4 ಲಕ್ಷ ಮನೆಗಳನ್ನು ಗುರುತಿಸಲಾಗಿದೆ ಎಂದರು.

ಅಳತೆ ಕಾರ್ಯಕ್ಕೆ ಕೋಟಗಲ್ ಗ್ರಾಮದಿಂದ ಚಾಲನೆ ನೀಡಲಾಗಿದೆ. ಅಭಿಯಾನದಡಿ ಗುರುತಿಸಿರುವ ಮನೆಗಳ ಪೈಕಿ ಯಾವುದೇ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಾಗಿರುವ ಆಸ್ತಿಗಳನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಹಕ್ಕುಪತ್ರ ವಿತರಿಸಲು ಜಿಲ್ಲಾಡಳಿತ ಯೋಜಿಸಿದೆ. ತಾಲ್ಲೂಕಿನಲ್ಲಿಯೇ 15,202 ಹಕ್ಕುಪತ್ರಗಳನ್ನು ವಿತರಿಸುವ ಗುರಿ ಇದೆ ಎಂದರು.

ಭೂ ಸುರಕ್ಷಾ ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಪೈಲಟ್ ಯೋಜನೆಯಾಗಿ ತೆಗೆದುಕೊಳ್ಳಲಾಗಿತ್ತು. ಈ ಯೋಜನೆಯಡಿ 3.5 ಲಕ್ಷ ಪುಟಗಳ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಈಗಾಗಲೇ ಚಿಕ್ಕಬಳ್ಳಾಪುರ, ಗುಡಿಬಂಡೆ, ಗೌರಿಬಿದನೂರು ತಾಲ್ಲೂಕುಗಳ ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಂಡಿದೆ. ಉಳಿದ ತಾಲ್ಲೂಕುಗಳ ಸ್ಕ್ಯಾನಿಂಗ್ ಕಾರ್ಯವು ಇನ್ನೆರಡು ತಿಂಗಳಲ್ಲಿ ಪೂರ್ಣ ಆಗಲಿದೆ ಎಂದರು.

ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಭೂ ದಾಖಲೆಗಳ ಉಪನಿರ್ದೇಶಕ ಮಂಜುನಾಥ ತವಣೆ, ತಹಶೀಲ್ದಾರ್ ಸುದರ್ಶನ್ ಯಾದವ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-16-2012630847

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.