ಶಿಡ್ಲಘಟ್ಟ: ನಗರದ ಪ್ಯಾರೇಗಾನ್ ಶಾಲೆ ಮುಂಭಾಗದಲ್ಲಿ ಸೋಮವಾರ ಮಾನವ ಬಂಧುತ್ವ ವೇದಿಕೆ ಹಾಗೂ ತಾಲ್ಲೂಕು ಪದವಿ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಅಂತರರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಮಾತನಾಡಿ, ‘ನೊಂದವರ, ಶೋಷಣೆಗೊಳಗಾದವರ ಧ್ವನಿಯಾಗುವ ಮತ್ತು ಸಮಾಜಕ್ಕೆ ಬೆಳಕಾಗುವ ರೀತಿ ಹೆಣ್ಣು ಮಕ್ಕಳ ಶಕ್ತಿವಂತರಾಗಬೇಕು. ಆಗ ಮಾತ್ರವೇ ಅಂತರರಾಷ್ಟ್ರೀಯ ಮಹಿಳಾ ದಿನ ಮಾಡುವುದಕ್ಕೆ ಅರ್ಹತೆ ಪಡೆಯುತ್ತೇವೆ’ ಎಂದು ಪ್ರತಿಪಾದಿಸಿದರು.

ವಿಚಾರವಂತಳು, ಪ್ರಜ್ಞಾನವಂತಳು, ಅರಿವು ಹೊಂದಿರುವ ಮಹಿಳೆಯೇ ಶಕ್ತಿಶಾಲಿ ಹೆಣ್ಣುಮಗಳು. ಹಳ್ಳಿಯಿಂದ ದಿಲ್ಲಿಯವರೆಗೆ ಸಮಾಜದ ಆರೋಗ್ಯ ಕಾಪಾಡುತ್ತಿರುವವರೇ ಆಶಾ ತಾಯಂದಿರು. ಗ್ರಾಮೀಣ ಭಾಗದ ಮಹಿಳೆಯೊಬ್ಬಳು ಗರ್ಭಿಣಿಯಾದಾಗಿನಿಂದ ಹಿಡಿದು ಜನಿಸಿದ ಮಗು 42 ದಿನಗಳು ಆಗುವವರೆಗೆ ಆ ತಾಯಿಗೆ ಅಗತ್ಯ ಪೌಷ್ಟಿಕ ಆಹಾರ, ಔಷಧಿ ನೀಡಿ ಉಪಚರಿಸುವವಳೇ ಆಶಾ ತಾಯಿ ಎಂದು ಕೊಂಡಾಡಿದರು.

ತಹಶೀಲ್ದಾರ್ ಎನ್.ಗಗನಸಿಂಧು ಮಾತನಾಡಿ, ಹೆಣ್ಣುಮಕ್ಕಳು ಶಿಕ್ಷಣಕ್ಕೆ ಆದ್ಯತೆ ನೀಡಿ, ಭವಿಷ್ಯದ ಸಾಧನೆಯೆಡೆಗೆ ಗುರಿ ಹೊಂದಿರಬೇಕು. ವೇದಿಕೆ ಮೇಲಿರುವ ಮಹಿಳಾ ಅಧಿಕಾರಿಗಳನ್ನು ಕಂಡು ಸ್ಫೂರ್ತಿಯಾಗಿ ಸ್ವೀಕರಿಸಬೇಕು ಎಂದು ಹೇಳಿದರು.

ಈ ವೇಳೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಕಾಲೇಜು ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದ ನಂತರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ರೇಷ್ಮೆ ನೂಲು ಬಿಚ್ಚಾಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಕಾರ್ಮಿಕ ಮಹಿಳೆಯರ ಸಮಸ್ಯೆಗಳನ್ನು ವಿಚಾರಿಸಿದರು. ಸರ್ಕಾರಿ ಉರ್ದು ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತನಾಡಿದರು.

ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ತಹಶೀಲ್ದಾರ್ ಎನ್.ಗಗನಸಿಂಧು, ತಾಲ್ಲೂಕು ಪಂಚಾಯಿತಿ ಇಒ ಆರ್.ಹೇಮಾವತಿ, ನಗರಸಭೆ ಪೌರಾಯುಕ್ತ ಜಿ. ಅಮೃತಾ, ಸಿಡಿಪಿಒ ವಿದ್ಯಾ ಎ.ವಸ್ತ್ರದ್, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ, ವಲಯ ಅರಣ್ಯಾಧಿಕಾರಿ ಪೂರ್ವಿಕಾರಾಣಿ, ಕಾರ್ಮಿಕ ನಿರೀಕ್ಷಕಿ ವಿಜಯಲಕ್ಷ್ಮಿ, ಚಲನಚಿತ್ರ ನಟಿ ರಾಜೇಶ್ವರಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೆಂಕಟೇಶರೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-16-1272896245

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.