ಶಿಡ್ಲಘಟ್ಟ: ಶುದ್ಧ ಕುಡಿಯುವ ನೀರಿನ ಘಟಕ ಎಂಬುದು ಕೇವಲ ಯಂತ್ರವಲ್ಲ. ಅದು ಜನರ ಆರೋಗ್ಯ, ಸುರಕ್ಷತೆ ಮತ್ತು ಮಾನವೀಯ ಮೌಲ್ಯಗಳ ಸಂಕೇತ.

ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕಾದರೆ, ಸರ್ಕಾರ ಮತ್ತು ಸಮಾಜ ಎರಡೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ತನ್ಮೂಲಕ ಪ್ರತಿ ನಗರವು ‘ಜಲ ಸಂರಕ್ಷಣೆ’ ಮತ್ತು ‘ಸುರಕ್ಷಿತ ಜಲ’ ಪೂರೈಕೆ ಸಾಧ್ಯವಾಗಲಿದೆ.

ನಗರದ ಹಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ನಡುವೆಯೇ, ನಗರಸಭೆ ವ್ಯಾಪ್ತಿಯಎರಡು ನೀರಿನ ಘಟಕಗಳು ಬಳಕೆಯಾಗದೆ ಮೂಲೆ ಗುಂಪಾಗಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ನಗರದ ಕೋಟೆ ವೃತ್ತದಲ್ಲಿರುವ ನಗರಸಭೆ ಸಮುದಾಯ ಭವನದ ಆವರಣದಲ್ಲಿ ನಿರ್ಮಿಸಿರುವ ಶುದ್ಧ ನೀರಿನ ಘಟಕ ಕಳೆದ ಕೆಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿಲ್ಲ.

ಸಾರ್ವಜನಿಕರಿಗೆ ಅನುಕೂಲವಾಗಬೇಕಿದ್ದ ನೀರಿನ ಟ್ಯಾಂಕ್ ಹಾಗೂ ಸರಬರಾಜು ವ್ಯವಸ್ಥೆಯು ನಿರ್ವಹಣೆ ಕೊರತೆಯಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ಸ್ಥಳೀಯರು ದೂರುತ್ತಾರೆ.

ಸಿದ್ದಾರ್ಥ ನಗರದಲ್ಲಿರುವ ಮತ್ತೊಂದು ನೀರಿನ ಘಟಕವೂ ನಿರ್ವಹಣೆ ಇಲ್ಲದೆ ಸಾರ್ವಜನಿಕರ ಬಳಕೆಗೆ ಅಲಭ್ಯವಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿರುವಾಗಲೇ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕಗಳು ಜನರ ಸೇವೆಗೆ ಲಭ್ಯವಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಗರಸಭೆ ಮಾಜಿ ಸದಸ್ಯ ಚಾಂದ್ ಪಾಷಾ ಮಾತನಾಡಿ, ‘ಅಭಿವೃದ್ಧಿಯು ಕೇವಲ ಮಾತಿಗೆ ಸೀಮಿತವಾಗಿದೆ. ಜನರಿಗೆ ಮೂಲ ಸೌಲಭ್ಯ ಒದಗಿಸುವಲ್ಲಿ ನಗರಸಭೆ ವಿಫಲವಾಗಿದೆ. ಕೂಡಲೇ ನೀರಿನ ಘಟಕಗಳನ್ನು ದುರಸ್ತಿ ಮಾಡಿ ಸಾರ್ವಜನಿಕ ಬಳಕೆಗೆ ಲಭ್ಯವಾಗುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.

ನಗರಸಭೆ ನಿರ್ವಹಣೆಯಲ್ಲಿ ಒಟ್ಟು ಏಳು ಶುದ್ಧನೀರಿನ ಘಟಕಗಳಿವೆ. 2ನೇ ವಾರ್ಡ್ನವ ಸಂತೇಬೀದಿಯಲ್ಲಿ, 13ನೇ ವಾರ್ಡ್ನ ರಚ್ಚೆಕಟ್ಟೆ ಬಳಿ, 22ನೇ ವಾರ್ಡ್ನ ದ್ವಿಮುಖ ಗಣಪತಿ ದೇವಸ್ಥಾನ, 5ನೇ ವಾರ್ಡ್ನ ಹೋಟೆಲ್ ಪಕ್ಕ, 18ನೇ ವಾರ್ಡ್, 30 ಮತ್ತು 8ನೇ ವಾರ್ಡ್ಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಆದರೆ, ಈ ಪೈಕಿ ಐದು ಘಟಕಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಇನ್ನೆರಡು ಘಟಕಗಳು ನಿರ್ವಹಣೆ ಇಲ್ಲದೆ ಬಾಗಿಲು ಮುಚ್ಚಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-16-478799329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.