ಶಿಡ್ಲಘಟ್ಟ: ತಾಲ್ಲೂಕಿನ ಪ್ರಸಿದ್ಧ ಸುಗಟೂರು ಕಲ್ಲೇಶ್ವರ, ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವವು ಇದೇ 25ರಿಂದ 28ರವರೆಗೆ ಅದ್ದೂರಿಯಾಗಿ ನಡೆಯಲಿದೆ.

ಏಪ್ರಿಲ್ 25ರಂದು ಕೂಟ, 26ರಂದು ಹೊಳೆ ಪರಿಷೆ ನಡೆಯಲಿದೆ. ಈ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಮಂತ್ರಿಗಳು, ಶಾಸಕರು, ಗಣ್ಯರು ಭಾಗವಹಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಏಪ್ರಿಲ್ 27 ರಂದು ಹೊಳೆಪರಿಷೆ ಮುಂದುವರಿಯಲಿದ್ದು, ಸಂಜೆ ದೀಪಾರಾಧನೆ ನಡೆಯಲಿದೆ.

ಏಪ್ರಿಲ್ 28ರಂದು ಮಕ್ಕಳ ಚೌಲೋಪನ ಯನ, ದೇವರ ದರ್ಶನ, ಗುರುಗಳ ಆಶೀರ್ವಾದದ ನಂತರ ಭಕ್ತರು ಸ್ವಸ್ಥಾನಗಳಿಗೆ ತೆರಳುವ ಕಾರ್ಯಕ್ರಮಗಳು ನಡೆಯಲಿವೆ.

ಜಾತ್ರೆಗೆ ರಾಜ್ಯ ಮತ್ತು ಸುತ್ತಮುತ್ತಲಿನ ರಾಜ್ಯದ ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಲಿದ್ದಾರೆ. ಈಗಾಗಲೇ ದೇವಾಲಯ ಟ್ರಸ್ಟ್ ಅಧ್ಯಕ್ಷರೂ ಆದ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್, ಶಾಸಕ ರವಿಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-16-1667496668

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.