ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5,000 ಗಡಿ ಸಮೀಪಿಸಿದ ಕೋವಿಡ್

Last Updated 6 ಸೆಪ್ಟೆಂಬರ್ 2020, 16:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ 83 ಹೊಸ ಕೋವಿಡ್‌ 19 ಪ್ರಕರಣಗಳು ವರದಿಯಾಗಿದ್ದು, ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು 4,950ಕ್ಕೆ ಏರಿಕೆಯಾಗಿ 5,000 ಗಡಿ ಸಮೀಪಿಸಿದೆ.

ಜಿಲ್ಲೆಯಲ್ಲಿ ಭಾನುವಾರ 112 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ ಚಿಕಿತ್ಸೆಯಿಂದ 3,890 ಜನರು ಗುಣಮುಖರಾಗಿದ್ದು, 69 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ 989 ಸೋಂಕಿತರು ಚಿಕಿತ್ಸೆಗೆ ಒಳಗಾಗಿದ್ದಾರೆ.

ಜಿಲ್ಲೆಯಲ್ಲಿ ಭಾನುವಾರದವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ 85,344 ಮಂದಿ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಆ ಪೈಕಿ 78,072 ಜನರಿಗೆ ಯಾವುದೇ ಸೋಂಕು ಕಾಣಿಸಿಕೊಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT