ಗುರುವಾರ , ಜುಲೈ 29, 2021
23 °C
ಬುಧವಾರ ಒಂದೇ ದಿನ 15 ಪ್ರಕರಣಗಳು ವರದಿ

ಚಿಕ್ಕಬಳ್ಳಾಪುರದಲ್ಲಿ ಕೋವಿಡ್‌ ನರ್ತನ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರವಾದ ನಗರದಲ್ಲಿ ಬುಧವಾರ ಒಂದೇ ದಿನ 15 ಮಂದಿಗೆ ಕೋವಿಡ್‌ ತಗುಲಿರುವುದು ಸ್ಥಳೀಯರ ನಾಗರಿಕರಲ್ಲಿ ಭೀತಿ ಹುಟ್ಟಿಸಿದೆ. ಇನ್ನೊಂದೆಡೆ, ಚಿಂತಾಮಣಿ ತಾಲ್ಲೂಕಿನಲ್ಲಿ ಸೋಂಕಿತ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ.

ಬುಧವಾರ ವರದಿಯಾದ ಪ್ರಕರಣಗಳಲ್ಲಿ ಬಹುಪಾಲು ಜನರು 8ನೇ ವಾರ್ಡ್‌ನ 20 ವರ್ಷದ ಸೋಂಕಿತ ಯುವಕ ಸಂಪರ್ಕಕ್ಕೆ ಬಂದವರಾಗಿದ್ದಾರೆ. ಸೋಂಕಿತನ ತಂದೆ, ಅವರಿಂದ ಸೊಸೆ, ಮೊಮ್ಮಗ, ನೆಂಟರು ಹೀಗೆ ಹಲವಾರು ಜನರಿಗೆ ಸೋಂಕು ತಗುಲಿದ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ಸೋಂಕಿತರ ಮನೆ ಪ್ರದೇಶಗಳನ್ನು ಸೀಲ್ ಡೌನ್ ಮಾಡಿರುವ ಆರೋಗ್ಯ ಇಲಾಖೆ ಸಿಬ್ಬಂದಿ, ವೈರಸ್‌ ನಾಶಕ ದ್ರಾವಣದಿಂದ ಶುಚಿಗೊಳಿಸುವುದು, ಸೋಂಕಿತರ ಸಂಪರ್ಕಕ್ಕೆ ಬಂದವರ ಮಾಹಿತಿ‌ ಕಲೆ ಹಾಕುವ ಕೆಲಸದಲ್ಲಿ ತೊಡಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 229 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 53, ಬಾಗೇಪಲ್ಲಿ 53, ಚಿಂತಾಮಣಿ 16, ಗೌರಿಬಿದನೂರು 96, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 11 ಜನರಿಗೆ ಕೋವಿಡ್ ಸೋಂಕಿದೆ.

ಸೋಂಕಿತರ ಪೈಕಿ ಮೂರು ಮಂದಿ ಕೋವಿಡ್‌ನಿಂದ, ಇಬ್ಬರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ಧಾರೆ. ಚಿಕಿತ್ಸೆಯಿಂದ 169 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ವಾರ್ಡ್‌ನಲ್ಲಿ 53 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು