ಶನಿವಾರ, ಜುಲೈ 24, 2021
28 °C
ಜಿಲ್ಲೆಯ ಜನರು ನಿರಾಳವಾಗುವ ಹೊತ್ತಿನಲ್ಲಿಯೇ ಮತ್ತೆ ಭಯ ಮೂಡಿಸಿದ ಸೋಂಕು

ಚಿಕ್ಕಬಳ್ಳಾಪುರ | ಕೋವಿಡ್–19‌ ಸೋಂಕಿತರ ಸಂಖ್ಯೆ 158ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಮೂರು ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 158ಕ್ಕೆ ಏರಿಕೆಯಾಗಿದೆ.

ಜಿಲ್ಲೆ ಕೋವಿಡ್‌ನಿಂದ ಮುಕ್ತವಾಯಿತು ಎನ್ನುವ ಹೊತ್ತಿನಲ್ಲಿಯೇ ಮತ್ತೆ ಹೊಸದಾಗಿ ಆರು ಪ್ರಕರಣಗಳು ವರದಿಯಾಗಿದ್ದು ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ.

ಜಿಲ್ಲೆಯಲ್ಲಿ 152 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದ ವೇಳೆ, ಈ ಪೈಕಿ ಮೂರು ಜನರು ಮೃತಪಟ್ಟು, 147 ಸೋಂಕಿತರು ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಇಬ್ಬರು ಮಾತ್ರ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಅವರನ್ನು ಆದಷ್ಟು ಬೇಗ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಜಿಲ್ಲೆಯನ್ನು ಕೋವಿಡ್‌ ಮುಕ್ತವೆಂದು ಘೋಷಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದರು.

ಆದರೆ, ಜೂನ್ 17 ರಂದು ಹೊಸದಾಗಿ ನೇಮಕಾತಿಯಾದ ಮಹಿಳಾ ಕಾನ್‌ಸ್ಟೆಬಲ್‌ವೊಬ್ಬರು ಸೇರಿದಂತೆ ಮತ್ತೆ ಮೂರು ಜನರಲ್ಲಿ ಕೋವಿಡ್‌ ದೃಢಪಟ್ಟು ಸೋಂಕಿತರ ಸಂಖ್ಯೆ 155ಕ್ಕೆ ಏರಿತ್ತು.

ಮುಂಬೈನಿಂದ ಜಿಲ್ಲೆಗೆ ವಾಪಾಸದವರ ಪೈಕಿ ಶುಕ್ರವಾರ ಬಾಗೇಪಲ್ಲಿಯ 27 ವರ್ಷ ವ್ಯಕ್ತಿ ಮತ್ತು 15 ವರ್ಷದ ಬಾಲಕನಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ. ಜತೆಗೆ ಚಿಕ್ಕಬಳ್ಳಾಪುರದಲ್ಲಿರುವ ಟೈಟಾನ್ ಕಂಪೆನಿಯಲ್ಲಿ ಕೆಲಸ ಮಾಡುವ ತಮಿಳುನಾಡು ಮೂಲದ 27 ವರ್ಷದ ಯುವಕನಲ್ಲಿ ಕೂಡ ಕೋವಿಡ್‌ ಸೋಂಕು ಇರುವುದು ಪತ್ತೆಯಾಗಿದೆ.

ಪ್ರಸ್ತುತ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ 8 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರದವರೆಗೆ ಜಿಲ್ಲೆಯಲ್ಲಿ 12,830 ಜನರ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 12,355 ಮಂದಿಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ.

ಮುಂಬೈನಿಂದ ಜಿಲ್ಲೆಗೆ ವಾಪಾಸದವರ 388 ಜನರ ಪೈಕಿ ಈವರೆಗೆ 122 ಜನರಲ್ಲಿ ಕೋವಿಡ್ ಇರುವುದು ದೃಢಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು