ಚಿಕ್ಕಬಳ್ಳಾಪುರ: ಜಿಲ್ಲೆಯ 13 ಸರ್ಕಾರಿ ಶಾಲೆಗಳಿಗೆ ಈಗ ಪಬ್ಲಿಕ್ ಶಾಲೆಯ ಭಾಗ್ಯ ದೊರೆತಿದೆ. ಈ ಮೂಲಕ ಮತ್ತಷ್ಟು ಶಾಲೆಗಳು ಕೆಪಿಎಸ್ ಶಾಲೆಗಳ ಹಣೆಪಟ್ಟಿ ಹೊತ್ತಿವೆ.

ಇದು ಜಿಲ್ಲೆಯ ಸರ್ಕಾರಿ ಶಾಲೆಗಳ ಬಲವರ್ಧನೆ ವಿಚಾರವಾಗಿ ಆಶಾದಾಯಕ ಬೆಳವಣಿಗೆಯಾಗಿದೆ. ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ ಸರ್ಕಾರವು ಪ್ರತಿ ವರ್ಷ ಇಂತಿಷ್ಟು ಎಂದು ಹಣ ನೀಡುತ್ತದೆ. ಅಲ್ಲದೆ ಎಲ್ಕೆಜಿಯಿಂದ ದ್ವಿತೀಯ ಪಿಯುಸಿಯವರೆಗೂ ಕೆಲವು ಕೆಪಿಎಸ್ ಶಾಲೆಗಳಲ್ಲಿ ಶಿಕ್ಷಣ ದೊರೆಯುತ್ತದೆ.

ಬಾಗೇಪಲ್ಲಿ ಪಟ್ಟಣದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ, ಬಾಗೇಪಲ್ಲಿ ತಾಲ್ಲೂಕಿನ ಚಾಕವೇಲು ಗ್ರಾಮದ ಸರ್ಕಾರಿ ಮಾದರಿ ಪ್ರೌಢಶಾಲೆ, ಪಾತಪಾಳ್ಯ ಸರ್ಕಾರಿ ಪ್ರೌಢಶಾಲೆ, ಗೌರಿಬಿದನೂರು ತಾಲ್ಲೂಕಿನ ಮಿಣಕನಗುರ್ಕಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪೋಶೆಟ್ಟಹಳ್ಳಿ ಮತ್ತು ದಿಬ್ಬೂರು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಚಿಂತಾಮಣಿಯ ಬಾಲಕಿಯ ಪದವಿ ಪೂರ್ವ ಕಾಲೇಜು, ಬಟ್ಲಹಳ್ಳಿ, ಯಗವಕೋಟೆ ಸರ್ಕಾರಿ ಪ್ರೌಢಶಾಲೆ, ಗೌರಿಬಿದನೂರು ತಾಲ್ಲೂಕಿನ ಹೊಸೂರು ಸರ್ಕಾರಿ ಶಾಲೆ, ಗೌರಿಬಿದನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿಡ್ಲಘಟ್ಟದ ನಗರದ ಸರ್ಕಾರಿ ಪ್ರೌಢಶಾಲೆ, ಸಾದಲಿ ಪದವಿ ಪೂರ್ವ ಕಾಲೇಜುಗಳು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಗೊಂಡಿವೆ.

ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರವು ಶಾಲೆಗಳಿಗೆ ‘ಕರ್ನಾಟಕ ಪಬ್ಲಿಕ್ ಶಾಲೆ’ (ಕೆಪಿಎಸ್) ಎನ್ನುವ ಚೌಕಟ್ಟು ಒದಗಿಸಿದೆ. ಗುಣಮಟ್ಟದ ಕಲಿಕೆ ಮತ್ತು ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಸರ್ಕಾರವು ಆರಂಭಿಸಿದ ಸುಧಾರಣಾ ಕಾರ್ಯತಂತ್ರವೇ ಕೆಪಿಎಸ್ ಶಾಲೆ.

ಒಂದೇ ಸೂರಿನಡಿ ಎಲ್ಕೆಜಿಯಿಂದ 12ನೇ ತರಗತಿಯವರೆಗೆ ಶಿಕ್ಷಣವನ್ನು ಕೆಪಿಎಸ್ ಶಾಲೆಗಳು ಒದಗಿಸುತ್ತದೆ. ಇದು ಕಲಿಕೆಯ ಗುಣಮಟ್ಟ ಉತ್ತಮಪಡಿಸಲು ಸಾಧ್ಯವಾಗುತ್ತದೆ.

2018–19ರಲ್ಲಿ 176 ಶಾಲೆಗಳೊಂದಿಗೆ ರಾಜ್ಯದಲ್ಲಿ ಕೆಪಿಎಸ್ಗಳು ಆರಂಭವಾದವು. ನಂತರದ ವರ್ಷಗಳಲ್ಲಿ ಈ ಸಂಖ್ಯೆ ಹೆಚ್ಚುತ್ತಲೇ ಹೋಗಿದೆ. ಕೆಪಿಎಸ್ ಶಾಲೆಗಳು ಭವಿಷ್ಯ ಕೇಂದ್ರಿತ ಶಿಕ್ಷಣವನ್ನು ಸಮಗ್ರವಾಗಿ ಓದಗಿಸುವ ವಿದ್ಯಾರ್ಥಿಗಳ ಕಲಿಕೆಯನ್ನು ಮತ್ತು ಫಲಿತಾಂಶವನ್ನು ಗಮನಾರ್ಹವಾಗಿ ಸುಧಾರಿಸುವ ಗುರಿ ಹೊಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.