ಗುರುವಾರ , ಆಗಸ್ಟ್ 22, 2019
25 °C

ಸಂಭ್ರಮದ ಕೌಮಾರಿಯಮ್ಮ ರಥೋತ್ಸವ

Published:
Updated:
Prajavani

ಚಿಕ್ಕಬಳ್ಳಾಪುರ: ತಾಲ್ಲೂಕಿನ ಹನುಮಂತಪುರದ ಕೌಮಾರಿಯಮ್ಮ ದೇವಿಯ ರಥೋತ್ಸವ ಗುರುವಾರ ಅದ್ಧೂರಿಯಾಗಿ ನೆರವೇರಿತು.

ರಥೋತ್ಸವದಲ್ಲಿ ವಿವಿಧ ರಾಜ್ಯಗಳಿಂದ ಭಕ್ತರು ಬಂದಿದ್ದರು. ಸುತ್ತಮುತ್ತಲಿನ ಗ್ರಾಮಗಳಿಂದ ಬಂದಿದ್ದ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದರು. ವಿಶೇಷ ಪೂಜೆ ಸಲ್ಲಿಸಿ, ಭಕ್ತಿ ಸಮರ್ಪಿಸಿದರು.

ರಥೋತ್ಸವ ಪ್ರಯುಕ್ತ ಬೆಳಿಗ್ಗೆಯಿಂದಲೇ ವಿಶೇಷ ಅಲಂಕಾರ, ಅಭಿಷೇಕ, ಪೂಜೆ ನಡೆದವು. ವಿವಿಧ ಧಾರ್ಮಿಕ ವಿಧಿ ವಿಧಾನಗಳ ಮೂಲಕ ರಥವನ್ನು ಅಲಂಕರಿಸಲಾಗಿತ್ತು.

ರಥದಲ್ಲಿ ಕೌಮಾರಿಯಮ್ಮ ದೇವಿ ಮೂರ್ತಿ ಪ್ರತಿಷ್ಠಾಪಿಸಿ, ಮಂಗಳವಾದ್ಯಗಳೊಂದಿಗೆ ಊರಿನಲ್ಲಿ ಪ್ರದಕ್ಷಿಣೆ ಮಾಡಲಾಯಿತು. ಭಕ್ತರು ಹೆಜ್ಜೆಗೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು. ಉಯ್ಯಾಲೋತ್ಸವ ಮತ್ತಿತರ ಧಾರ್ಮಿಕ ಕಾರ್ಯ ನಡೆದವು. ಮಾತಾ ಮಹಾದೇವಿ ಭಕ್ತಮಂಡಲಿ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

Post Comments (+)