ಚಿಕ್ಕಬಳ್ಳಾಪುರ: ನಗರದ ಕೆ.ವಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಗಳ ದತ್ತಿ ದಿನ ಮತ್ತು ಸಿ.ವಿ ವೆಂಕಟರಾಯಪ್ಪ ಅವರ 110ನೇ ಜಯಂತಿಗೆ ಬುಧವಾರ ತೆರೆ ಬಿದ್ದಿತು.

ದತ್ತಿದಿನದ ಅಂಗವಾಗಿ ರಕ್ತದಾನ ಶಿಬಿರ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದಿದ್ದವು.

ಬುಧವಾರ ಕೆ.ವಿ ಕ್ಯಾಂಪಸ್ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಮತ್ತು ಶಿಕ್ಷಣ ಸಂಸ್ಥೆಗಳ ನಿವೃತ್ತ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ದತ್ತಿದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆದವು. ಹೀಗೆ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಿತು.

ಚಿಕ್ಕಬಳ್ಳಾಪುರ ನಗರದ ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಹೋರಾಟಗಾರರು ಸೇರಿದಂತೆ ಅಪಾರ ಸಂಖ್ಯೆಯ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಸಿ.ವಿ ವೆಂಕಟರಾಯಪ್ಪ ಅವರ ಜಯಂತಿ ಅಂಗವಾಗಿ ಜಿಲ್ಲಾ ಆಸ್ಪತ್ರೆ, ತಾಯಿ ಮಕ್ಕಳ ಆಸ್ಪತ್ರೆ, ಮಾನಸ ಆಸ್ಪತ್ರೆಯ ರೋಗಿಗಳಿಗೆ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಹಣ್ಣು, ಬ್ರೆಡ್ ವಿತರಿಸಲಾಯಿತು.

ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಮಾತನಾಡಿ, ಸಿ.ವಿ ವೆಂಕಟರಾಯಪ್ಪ ಅವರು ಈ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಯ ರೂವಾರಿ. ಬಯಲು ಸೀಮೆಯ ಚಿಕ್ಕಬಳ್ಳಾಪುರವು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಅವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಗಳು ಕಾರಣ ಎಂದು ಹೇಳಿದರು.

ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಜಿ.ಪಂ ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ಮಾವು ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್, ನೀರಾವರಿ ಹೋರಾಟಗಾರ ಆಂಜನೇಯರೆಡ್ಡಿ, ಸುಷ್ಮಾ ಶ್ರೀನಿವಾಸ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.