ಚಿಕ್ಕಬಳ್ಳಾಪುರ: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾಗಿರುವ ಕಾರ್ಮಿಕರ ಮಕ್ಕಳಿಗಾಗಿ ಒಟ್ಟು ₹1,125 ಕೋಟಿ ವೆಚ್ಚದಲ್ಲಿ ಜಿಲ್ಲೆಗೊಂದರಂತೆ ವಸತಿ ಶಾಲೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬುಧವಾರ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಕೇಂದ್ರ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುವುದಕ್ಕೆ ಅನುಕೂಲವಾಗುವಂತೆ ಬೆಂಗಳೂರಿನಲ್ಲಿ ₹10 ಕೋಟಿ ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲಾಗುವುದು ಎಂದೂ ಅವರು ತಿಳಿಸಿದರು. ‘ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ಪ್ರವಾಸೋದ್ಯಮ, ನೀರಾವರಿ ಮತ್ತು ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದ ₹3,400 ಕೋಟಿ ವೆಚ್ಚದ ಹಲವು ಯೋಜನೆಗಳಿಗೆ ಅನುಮೋದನೆ ನೀಡಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.