ಚಿಕ್ಕಬಳ್ಳಾಪುರ: ಆಶ್ರಯ ಯೋಜನೆಗಳಿಗೆ ಫಲಾನುಭವಿಗಳನ್ನು ಗ್ರಾಮಸಭೆಗಳ ಮೂಲಕ ನಿಯಮಗಳ ರೀತಿ ಸಮರ್ಪಕವಾಗಿಯೇ ಆಯ್ಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಮುಖ್ಯಮಂತ್ರಿ ಗ್ರಾಮೀಣ ಆಶ್ರಯ ನಿವೇಶನ ಯೋಜನೆ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಯೋಜನೆಯಡಿ ನಿವೇಶನ ಹಂಚಿಕೆಗೆ 959.11 ಎಕರೆ ಜಮೀನು ಲಭ್ಯವಿದೆ. 358 ಸ್ಥಳಗಳಲ್ಲಿ ಈ ಜಮೀನಿನಿಂದ ನಿವೇಶನ ನೀಡಬಹುದು. ಈ ಪೈಕಿ 758.14 ಎಕರೆ ಜಮೀನಿಗೆ ಜಿ.ಪಿ.ಎಸ್. ಆಧಾರಿತ ನಕ್ಷೆ ತಯಾರಿಸಲಾಗಿದೆ. ಮಂಜೂರಾತಿ ಆಗಿರುವ ಜಮೀನಿನಲ್ಲಿ ನಿವೇಶನಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ತ್ವರಿತಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿ ಹಾಜರಾತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಗ್ರಾಮಸಭೆಗಳು ಕಟ್ಟುನಿಟ್ಟಾಗಿ ನಡೆಯಬೇಕು. ಈ ಬಗ್ಗೆ ಅಧಿಕೃತ ದಾಖಲೆಗಳು, ಛಾಯಾಚಿತ್ರ ಹಾಗೂ ವಿಡಿಯೊ ಮಾಡಿಸಿಡಬೇಕು. ಯಾವುದೇ ಒತ್ತಡ, ಶಿಫಾರಸ್ಸುಗಳಿಗೆ ಮಣಿಯಬಾರದು ಎಂದರು.

ಆಶ್ರಯ ವಸತಿ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಈಗಾಗಲೇ 2018ರಲ್ಲಿ ಸಮೀಕ್ಷೆ ಮಾಡಿ ಅರ್ಜಿ ಸ್ವೀಕರಿಸಿರುವ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಬೇಕು. ಮೊದಲು ಅರ್ಜಿ ಹಾಕಿದವರಿಗೆ ಪ್ರಥಮ ಆದ್ಯತೆ ನೀಡಬೇಕು. ನಿವೇಶನಗಳನ್ನು ನೀಡುವಾಗ ಕಡಿಮೆ ಅಳತೆಯ ನಿವೇಶನಗಳನ್ನು ನೀಡಬಾರದು ಎಂದರು.

ಕನಿಷ್ಠ 30X40 ಅಡಿ ಅಳತೆಯ ನಿವೇಶನಗಳನ್ನು ನೀಡಬೇಕು. 30X40 ಅಡಿಗೂ ಕಡಿಮೆ ಅಳತೆಯ ನಿವೇಶನಗಳನ್ನು ವಿಂಗಡಿಸಿ ಬಡಾವಣೆಗಳನ್ನು ಮಾಡಿದಲ್ಲಿ ಅನುಮೋದನೆ ನೀಡಬಾರದು. ಸ್ಥಳೀಯ ಹಂತದ ಅಧಿಕಾರಿಗಳೆ ತಿರಸ್ಕರಿಸಬೇಕು ಎಂದು ನಿರ್ದೇಶನ ನೀಡಿದರು.

ಸರ್ಕಾರದ ಆದೇಶಗಳಲ್ಲಿ ಹಾಗೂ ಸುತ್ತೋಲೆಗಳಲ್ಲಿ ಯಾವ ಮಾನದಂಡಗಳಿವೆಯೋ ಅವುಗಳನ್ನು ಪಾಲಿಸಿದರೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ. ಒಂದು ವೇಳೆ ಅರ್ಹರಲ್ಲದ ಒಬ್ಬ ಫಲಾನುಭವಿಗೆ ನಿವೇಶನ ವಿತರಣೆ ಆದರೂ ಇಡೀ ಆಡಳಿತ ವ್ಯವಸ್ಥೆಯ ಮೇಲೆ ಅತಿಕೆಟ್ಟ ಪರಿಣಾಮ ಬೀರುತ್ತದೆ. ಆ ರೀತಿಯ ಲೋಪಗಳಿಗೆ ಅವಕಾಶ ನೀಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ನಗರಾಭಿವೃದ್ಧಿ ಕೋಶದ ನಿರ್ದೇಶಕ ಮಂಜುನಾಥ್, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಪೌರಾಯುಕ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

‘ಜಾಗ ಲಭ್ಯವಿದ್ದರೆ ಪ್ರಸ್ತಾವ ಸಲ್ಲಿಸಿ’

ಆಶ್ರಯ ಯೋಜನೆಗಳಡಿ ಅರ್ಹ ಫಲಾನುಭವಿಗಳಿದ್ದು ಲಭ್ಯ ಜಾಗವಿದ್ದರೆ ಪ್ರಸ್ತಾವಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ಕೂಡಲೆ ಸಲ್ಲಿಸಬೇಕು ಎಂದು ಪ್ರಭು ತಿಳಿಸಿದರು. ಜಮೀನು ಆಯ್ಕೆ ಮಾಡುವಾಗ ಕಲ್ಲುಬಂಡೆಗಳಿರುವ ಹಳ್ಳ ಕೊಳ್ಳ ಬೆಟ್ಟ ಗುಡ್ಡವಿರುವ ವಾಸಕ್ಕೆ ಯೋಗ್ಯವಲ್ಲದ ಜಾಗ ಆಯ್ಕೆ ಮಾಡಬಾರದು. ತಾಲ್ಲೂಕು ಮಟ್ಟದ ಹಾಗೂ ಸ್ಥಳೀಯ ಅಧಿಕಾರಿಗಳು ಸ್ಥಳ ತನಿಖೆ ಮಾಡಬೇಕು. ಭೂ ಮಾಪಕರು ಈ ಬಗ್ಗೆ ಗಮನಹರಿಸಿ ವರದಿ ಮಾಡಬೇಕು ಎಂದು ಹೇಳಿದರು. ಖಾಸಗಿ ಅಥವಾ ಸರ್ಕಾರದಿಂದ ಬಡಾವಣೆಗಳನ್ನು ನಿರ್ಮಿಸುವಾಗ ಕಡ್ಡಾಯವಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರಗಳಿಂದ ನಕ್ಷೆ ಅನುಮೋದನೆ ಪಡೆಯಲೇಬೇಕು ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.