ಗುಡಿಬಂಡೆ: ಭೂಸುರಕ್ಷಾ ಯೋಜನೆಯಡಿ ರೈತರು, ಸಾರ್ವಜನಿಕರಿಗೆ ಸುಮಾರು 150 ವರ್ಷದ ಹಳೆಯ ದಾಖಲೆಗಳು ಸ್ಕ್ಯಾನ್ ಆಗಿ ಗಣಕೀಕರಣಗೊಂಡು ಆನ್ಲೈನ್ನಲ್ಲಿ ಲಭ್ಯವಾಗಲಿವೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ರಾಜ್ಯದಾದ್ಯಂತ ಭೂ–ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆ ಗಣಕೀಕರಣ ಕಾರ್ಯಕ್ರಮಕ್ಕೆ ಬುಧವಾರ ಗುಡಿಬಂಡೆ ತಾಲ್ಲೂಕು ಕಚೇರಿಯಲ್ಲಿ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕು ಕಚೇರಿ, ಉಪನೋಂದಣಾಧಿಕಾರಿ ಕಚೇರಿ ಹಾಗೂ ಭೂಮಾಪನ ಇಲಾಖೆಯ 150 ವರ್ಷಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಶಾಶ್ವತವಾಗಿ ಭದ್ರ ಮಾಡುವ, ಆನ್ಲೈನ್ನಲ್ಲಿ ರೈತರಿಗೆ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಭೂ ಸುರಕ್ಷಾ ಯೋಜನೆಯ ಮೂಲಕ ರೈತರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡಲು ಸರ್ಕಾರ ಹೆಜ್ಜೆ ಇಟ್ಟಿದೆ. ಈಗಾಗಲೇ 31 ತಾಲ್ಲೂಕುಗಳಲ್ಲಿ 8 ತಿಂಗಳ ಹಿಂದೆ ಆರಂಭವಾದ ಪೈಲಟ್ ಕಾರ್ಯಕ್ರಮದಡಿ ಸುಮಾರು 15 ಲಕ್ಷ ಕಡತಗಳನ್ನು ಸ್ಕ್ಯಾನ್ ಮಾಡಿ ಒಟ್ಟು 7.95 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. ಉಳಿದ 209 ತಾಲ್ಲೂಕುಗಳ ಒಟ್ಟು 150 ಕೋಟಿ ಪುಟಗಳ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಗುರಿ ಇದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.