ಭಾನುವಾರ, ಜೂಲೈ 5, 2020
26 °C

ನಿವೇಶನ ಹಕ್ಕುಪತ್ರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ತಾಲ್ಲೂಕಿನಲ್ಲಿ ನಿವೇಶನ ರಹಿತರಿಗೆ ಪಕ್ಷಾತೀತವಾಗಿ ನಿವೇಶನ ಹಂಚಲಾಗಿದೆ ಎಂದು ಶಾಸಕ ಎಸ್‌.ಎನ್. ಸುಬ್ಬಾರೆಡ್ಡಿ ಹೇಳಿದರು.

ತಾಲ್ಲೂಕಿನ ತಿಮ್ಮಂಪಲ್ಲಿ ಮದಕವಾರಿಪಲ್ಲಿ ಗ್ರಾಮದ 40 ಮಂದಿಗೆ ಆಶ್ರಯ ಯೋಜನೆ ಅಡಿಯಲ್ಲಿ ನಿವೇಶನ ಹಕ್ಕು ಪತ್ರ ವಿತರಿಸಿ ಮಾತನಾಡಿದರು.

ಸರ್ಕಾರದ ಯೋಜನೆಗಳು ಇಂದಿಗೂ ಬಡವರಿಗೆ ಸಿಗುತ್ತಿಲ್ಲ. ಕೆಲವರಿಗೆ ನಿವೇಶನ, ಮನೆ ಇಲ್ಲದೇ ಗುಡಿಸಲುಗಳಲ್ಲಿ ವಾಸ ಮಾಡುತ್ತಿದ್ದಾರೆ. ತಾಲ್ಲೂಕಿನಲ್ಲಿ ಇದುವರಿಗೂ ಅರ್ಜಿ ಸಲ್ಲಿಸಿರುವ ಅರ್ಹ ನಿವೇಶನ ರಹಿತರಿಗೆ ನಿವೇಶನ, ಮನೆ ನಿರ್ಮಿಸುವುದಾಗಿ ತಿಳಿಸಿದರು.

ತಾಲ್ಲೂಕಿನ ಬೊಮ್ಮಯ್ಯಗಾರಿಪಲ್ಲಿ ಗ್ರಾಮದ ಬಳಿ ₹ 76 ಲಕ್ಷದ ಕೆರೆ ಕಟ್ಟೆ ಕಾಮಗಾರಿಯನ್ನು ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ವೀಕ್ಷಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ನರಸಿಂಹಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥಸ್ವಾಮಿ, ಅಧ್ಯಕ್ಷ ಕೆ.ಆರ್.ನರೇಂದ್ರ ಬಾಬು, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವಿ.ಮಂಜುನಾಥ್, ಕೆಡಿಪಿ ಸದಸ್ಯ ಅಮರನಾಥ ರೆಡ್ಡಿ, ಗ್ರಾಮದ ಮುಖಂಡ ವೆಂಕಟೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.