ಚಿಕ್ಕಬಳ್ಳಾಪುರ: ‘ಮಾನಸಿಕ ರೋಗಿಗಳಿಗೆ ಉಚಿತ ಕಾನೂನು ನೆರವನ್ನು ಕಾನೂನು ಸೇವೆಗಳ ಪ್ರಾಧಿಕಾರದಿಂದ ನೀಡುವ ಸೌಲಭ್ಯವಿದೆ. ಯಾವುದೇ ನ್ಯಾಯಾಲಯದಲ್ಲಿ ಶುಲ್ಕವಿಲ್ಲದೆ ಉಚಿತವಾಗಿ ಅವರ ಪರವಾಗಿ ಪ್ರಕರಣ ನಡೆಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದು ನ್ಯಾಯಾಧೀಶ ಕಾಂತರಾಜು ಎಸ್.ವಿ ತಿಳಿಸಿದರು.

ತಾಲ್ಲೂಕಿನ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಕ್ರವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾನೂನು ಸೇವೆಗಳ ಪ್ರಾಧಿಕಾರವು ಮಾನಸಿಕ ರೋಗಿಗಳ ಆರೋಗ್ಯ ಸುಧಾರಿಸಲು ಉಚಿತ ಸಲಹೆ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುತ್ತದೆ. ಮಾನಸಿಕ ಆರೋಗ್ಯದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಇಲ್ಲ. ತಮ್ಮ ಮನಸ್ಸಿನ ಮೇಲೆ ಆಗುವ ಒತ್ತಡ, ಗೊಂದಲ, ನಿರಂತರ ಭಯ, ಆತಂಕವನ್ನು ಕೆಲವರು ನಿರ್ಲಕ್ಷ್ಯ ಮಾಡುತ್ತಾರೆ. ಇಂತಹ ನಿರ್ಲಕ್ಷ್ಯವನ್ನು ಮಾಡುವುದರಿಂದ ಹೆಚ್ಚಿನ ತೊಂದರೆಗೆ ಗುರಿ ಆಗುತ್ತಾರೆ ಎಂದು ಹೇಳಿದರು.

ಮಾನಸಿಕ ಆರೋಗ್ಯ ಮತ್ತು ಸಮಸ್ಯೆಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ಕಾನೂನು ಸೇವಾ ಪ್ರಾಧಿಕಾರದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾನಸಿಕ ಆರೋಗ್ಯ ಕುರಿತು ಅರಿವು ಮೂಡಿಸುವ ಹಾಗೂ ಮಾನಸಿಕ ರೋಗಕ್ಕೆ ತುತ್ತಾಗಿರುವ ವ್ಯಕ್ತಿಗಳ ಸಮಸ್ಯೆಗಳನ್ನು ಆಲಿಸುವ, ಪರಿಹರಿಸುವ ಸಲುವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ರಚಿಸಿದೆ ಎಂದು ವಿವರಿಸಿದರು.

ಈ ಸಮಿತಿ ಮೂಲಕ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿ ಜನ ಸಾಮಾನ್ಯರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಈ ಸೌಲಭ್ಯಗಳ ಕುರಿತು ಮಾನಸಿಕ ಅನಾರೋಗ್ಯಕ್ಕೆ ಒಳಗಾದ ವ್ಯಕ್ತಿಗಳ ಕುಟುಂಬದ ಸದಸ್ಯರು ಜಾಗೃತಿ ಹೊಂದಬೇಕು. ಲಭ್ಯವಿರುವ ಕಾನೂನು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಮಾನಸಿಕ ರೋಗಿಗಳಿಗೆ ಕೊಡಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಮಾತನಾಡಿ, ಶರೀರದ ಕಾಯಿಲೆಗಳಲ್ಲಿ ನಾನಾ ಬಗೆ ಇವೆ. ಅದೇ ರೀತಿ ಮಾನಸಿಕ ಕಾಯಿಲೆಗಳಲ್ಲೂ ನಾನಾ ಬಗೆಗಳಿವೆ. ಚಿತ್ತ ಚಂಚಲತೆ, ಚಿತ್ತ ವಿಕಲತೆ, ಮದ್ಯ ವ್ಯಸನ, ಬುದ್ದಿ ಮಾಂದ್ಯ, ಮಕ್ಕಳಲ್ಲಿ ಕಂಡು ಬರುವ ನಡವಳಿಕೆ ದೋಷಗಳಿವೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಬಿ., ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಎಂ.ಎಲ್. ಮಂಜುನಾಥ, ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಬಿ.ಜಿ. ಹೇಮಂತ್ ಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ. ಅಭಿಲಾಷ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಶಿವಕುಮಾರ್, ಮನೋವೈದ್ಯ ಡಾ. ಜಿ.ಹೇಮಂತ್ ಕುಮಾರ್, ಡಾ.ಎ. ಲಾವಣ್ಯ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.