ಶುಕ್ರವಾರ, ಡಿಸೆಂಬರ್ 3, 2021
23 °C

ಕಾನೂನು ಅರಿವು ನೆರವು ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಆಶ್ರಯದಲ್ಲಿ ನ. 26ರಂದು ಮಧ್ಯಾಹ್ನ 2ಗಂಟೆಗೆ ಸಂವಿಧಾನ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಉಪನ್ಯಾಸಕ ಡಾ.ಎಂ.ಬಿ. ಮಂಜುನಾಥರೆಡ್ಡಿ ಅಧ್ಯಕ್ಷತೆವಹಿಸಲಿದ್ದಾರೆ. ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಎಚ್.ಎಸ್. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಜೆ. ಶಿವಕುಮಾರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ರೂಪಾ, ವಕೀಲರ ಸಂಘದ ಅಧ್ಯಕ್ಷ ಎಸ್. ರಾಜಾರಾಂ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು