ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಕಾನೂನು ಅರಿವು ಕಾರ್ಯಕ್ರಮ

Last Updated 8 ಅಕ್ಟೋಬರ್ 2021, 6:21 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಮಹಿಳೆಯರನ್ನು ಒಳಗೊಂಡಂತೆ 10ಕ್ಕಿಂತ ಹೆಚ್ಚು ಜನರು ಒಂದೆಡೆ ಕೆಲಸ ಮಾಡುವ ಸರ್ಕಾರಿ, ಖಾಸಗಿ ಸಂಸ್ಥೆ, ನಿಗಮ, ಮಂಡಳಿ ಅಥವಾ ಯಾವುದೇ ಸಂಸ್ಥೆಯಲ್ಲಿ ಮಹಿಳೆಯರ ಕುಂದು ಕೊರತೆಗಳ ದೂರು ಆಲಿಸಲು ಆಂತರಿಕ ಸಮಿತಿಯನ್ನು ರಚಿಸಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ನ್ಯಾಯಾಧೀಶ ಎಸ್. ನಟರಾಜ್ ತಿಳಿಸಿದರು.

ನಗರದ ಸಿವಿವಿ ಕ್ಯಾಂಪಸ್‌ನ ‌ಬಿ.ಇಡಿ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಆರೋಗ್ಯ ಇಲಾಖೆ ಆಶ್ರಯದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ ಕಾಯ್ದೆ 2013ರ ಬಗ್ಗೆ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯ ದೇಹ ಮುಟ್ಟುವುದು, ಅಶ್ಲೀಲ ಚಿತ್ರಗಳನ್ನು ತೋರಿಸುವುದು, ಅಶ್ಲೀಲ ಸಂದೇಶ ಕಳುಹಿಸುವುದು, ದುರುದ್ದೇಶದಿಂದ ಕಿರುಕುಳ ಕೊಡು ವುದು, ಬೆದರಿಕೆ, ಲೈಂಗಿಕವಾಗಿ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಬೇರೆ ರೀತಿಯಲ್ಲಿ ತೊಂದರೆ ಕೊಡುವುದು, ಈ ರೀತಿಯ ನಡವಳಿಕೆಯನ್ನು ಯಾವುದೇ ಪುರುಷರು ಮಾಡಿದರೂ ಅವರ ವಿರುದ್ಧ ಸಮಿತಿಯಲ್ಲಿ ದೂರು ಸಲ್ಲಿಸಿ ನ್ಯಾಯ ಪಡೆಯಬಹುದು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಲಕ್ಷ್ಮಿಕಾಂತ್ ಮಿಸ್ಕಿನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT