ಸೋಮವಾರ, ಸೆಪ್ಟೆಂಬರ್ 20, 2021
22 °C

ಜನಪ್ರತಿನಿಧಿಗಳು, ನಟ-ನಟಿಯರು ಜನರಿಗೆ ಮಾದರಿಯಾಗಲಿ: ಸಚಿವ ಕೆ. ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Dr K Sudhakar

ಗೌರಿಬಿದನೂರು: ಜನಪ್ರತಿನಿಧಿಗಳು, ನಟ-ನಟಿಯರು ಜನರಿಗೆ ಮಾದರಿಯಾಗಿರಬೇಕು. ಇವರನ್ನು ನೋಡಿ ಅನೇಕರು ಜೀವನದಲ್ಲಿ ಬದಲಾಗುತ್ತಾರೆ. ಆದರೆ, ನಾವೇ ಮಾದಕ ವಸ್ತುಗಳನ್ನು ಸೇವಿಸಿ ತಪ್ಪು ಸಂದೇಶ ಜನರಿಗೆ ಕೊಡಬಾರದು. ಇದರಿಂದ ಸಮಾಜದಲ್ಲಿ ಗಳಿಸಿದ ಹೆಸರು ಮಣ್ಣು ಪಾಲಾಗುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಗೌರಿಬಿದನೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ‘‌ರಾಜ್ಯದಲ್ಲಿ ಮಾದಕ ವಸ್ತುಗಳ ನಿಗ್ರಹಕ್ಕೆ ಕಠಿಣ ಕ್ರಮ ತಗೆದುಕೊಳ್ಳಲಾಗುವುದು. ಈಗಾಗಲೇ ಈ ಸಂಬಂಧ ಗೃಹ ಸಚಿವರ ಜತೆ ಮಾತನಾಡಿದ್ದೇನೆ. ಸರ್ಕಾರ ಈ ಚಟುವಟಿಕೆಗೆಳ ವಿರುದ್ಧ ಕ್ರಮ ಕೈಗೊಳ್ಳಲಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು