ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಎಲ್ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 100 ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಕೇಂದ್ರ ಆರಂಭಿಸಲಾಗುತ್ತಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದಲೇ ನಿರ್ವಹಣೆ ಆಗಲಿದ್ದು, ಪ್ರಸ್ತುತ ಇರುವ ಅಂಗನವಾಡಿಗಳಲ್ಲೇ ಎಲ್ಕೆಜಿ, ಯುಕೆಜಿ ತರಗತಿ ನಡೆಸಲಾಗುತ್ತದೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಬ್ಯಾಗ್ ಹಾಗೂ ಪುಸ್ತಕ ವಿತರಣೆ ಮಾಡಲಾಗುತ್ತದೆ. ವಿವಿಧ ಸೌಲಭ್ಯಗಳ ಜೊತೆಗೆ ಎಲ್ಇಡಿ ಟಿ.ವಿ ವ್ಯವಸ್ಥೆಯನ್ನೂ ಮಾಡಲಾಗಿದೆ. ಮಕ್ಕಳಿಗೆ ಕೂರಲು ಬೆಂಚಿನ ವ್ಯವಸ್ಥೆಯೂ ಇರಲಿದೆ.

ಕಳೆದ ವರ್ಷ ಬೆಂಗಳೂರಿನ ಅಂಗನವಾಡಿ ಕೇಂದ್ರಗಳಲ್ಲಿ ಆರಂಭಿಸಿದ್ದ ಎಲ್ಕೆಜಿ, ಯುಕೆಜಿ ಆರಂಭಿಸಲಾಗಿತ್ತು. ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಹಾಗಾಗಿ ಪ್ರಸಕ್ತ ಶೈಕ್ಷಣಿಕ ವರ್ಷ ರಾಜ್ಯದಾದ್ಯಂತ 5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಈ ತರಗತಿ ಆರಂಭಕ್ಕೆ ತಯಾರಿ ನಡೆದಿದೆ.

ಈ ಭಾಗವಾಗಿ ಜಿಲ್ಲೆಯ 100 ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ನವೆಂಬರ್ನಿಂದ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೋಜಿಸಿದೆ.

ಕನ್ನಡ, ಇಂಗ್ಲಿಷ್ ಎರಡೂ ಮಾಧ್ಯಮಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ಪಿಯುಸಿ, ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳ ವಿದ್ಯಾರ್ಹತೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿಯನ್ನೂ ನೀಡಲಾಗುತ್ತಿದೆ. ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಬೋಧನೆ ನಡೆಯಲಿದ್ದು, ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟವೂ ಸಿಗಲಿದೆ.

ಈಗಾಗಲೇ ಅಂಗನವಾಡಿಗಳಲ್ಲಿ ಪಾಠ ಮಾಡುತ್ತಿರುವ ಪಿಯುಸಿ, ಪದವೀಧರ ಶಿಕ್ಷಕರೇ ಎಲ್ಕೆಜಿ, ಯುಕೆಜಿಗೆ ಪಾಠ ಮಾಡಲಿದ್ದಾರೆ. ಅವರಿಗೆ ವಿಶೇಷ ತರಬೇತಿ ಕೂಡ ನೀಡಲಾಗುತ್ತಿದೆ.

ಶಿಡ್ಲಘಟ್ಟ ತಾಲ್ಲೂಕಿನ 20 ಅಂಗಡಿನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳು ಆರಂಭವಾಗಲಿದ್ದು, ಇದು ಗರಿಷ್ಠ ಎನಿಸಿದೆ.

ಎಲ್ಕೆಜಿಗೆ 4 ವರ್ಷಗಳಾಗಿರಬೇಕು (4ರಿಂದ 5 ವರ್ಷ), ಯುಕೆಜಿಗೆ 5 ವರ್ಷ ತುಂಬಿರಬೇಕು (5ರಿಂದ 6 ವರ್ಷ). ಸದ್ಯಕ್ಕೆ ಜಿಲ್ಲೆಯಲ್ಲಿ ಹೆಚ್ಚುವರಿ ಕೊಠಡಿ ಹಾಗೂ ಶಿಕ್ಷಕರ ಅಗತ್ಯವಿದೆ. 3ರಿಂದ 4 ವರ್ಷದ ಮಕ್ಕಳನ್ನು ಅಂಗನವಾಡಿಗೆ ಸೇರಿಸಿಕೊಳ್ಳಲಾಗುತ್ತದೆ.

‘ಎಲ್ಕೆಜಿ, ಯುಕೆಜಿ ಆರಂಭಿಸಿಲು ಹಸಿರು ನಿಶಾನೆ ಸಿಕ್ಕಿದ್ದು, ಇಲಾಖೆಯಿಂದ ಬಿರುಸಿನ ಸಿದ್ಧತೆ ನಡೆಯುತ್ತಿದೆ. ಶಿಕ್ಷಕರಿಗೆ ತರಬೇತಿ ನೀಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ ರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

ಐಸಿಡಿಎಸ್ ಯೋಜನೆಗೆ 50 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ನಲ್ಲಿ ರಾಜ್ಯ ಮಟ್ಟದಲ್ಲಿ ಸುವರ್ಣ ಮಹೋತ್ಸವ ನಡೆಯುತ್ತಿದೆ. ಈ ಅಂಗವಾಗಿ ಜಿಲ್ಲೆಯಲ್ಲಿ 100 ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭವಾಗಲಿವೆ. ನಮ್ಮ ಅಂಗನವಾಡಿಗಳಿಗೆ ಟಿವಿ ಸೇರಿದಂತೆ ಅಗತ್ಯ ಕಲಿಕಾ ಸಾಮಗ್ರಿಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ದೊಡ್ಡ ಗ್ರಾಮಗಳಲ್ಲಿನ ಅಂಗನವಾಡಿಗಳನ್ನು ಆಯ್ಕೆ ಮಾಡಲಾಗಿದೆ. ಒಂದು ಗ್ರಾಮದಲ್ಲಿ ಎರಡು ಅಂಗನವಾಡಿಗಳು ಇವೆ ಎಂದರೆ ಅವುಗಳಲ್ಲಿ ಒಂದರಲ್ಲಿ ಎಲ್ಕೆಜಿ ಮತ್ತೊಂದರಲ್ಲಿ ಯುಜಿಕೆ ನಡೆಸಲಾಗುತ್ತದೆ. ಜಿಲ್ಲೆಯಲ್ಲಿ 2014 ಅಂಗನವಾಡಿಗಳು ಇವೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.