ಸೋಮವಾರ, ಜುಲೈ 4, 2022
24 °C
ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ದಿನಾಚರಣೆ: 10 ಮಂದಿಗೆ ‘ಸರ್ವೋತ್ತಮ ಸೇವಾ’ ಪ್ರಶಸ್ತಿ

ನೌಕರರ ಭವನಕ್ಕೆ ಸ್ಥಳ ಗುರುತು: ಡಿ.ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಸರ್ಕಾರಿ ನೌಕರರ ಸಂಘವು ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೀಡಿರುವ ಮನವಿಯನ್ನು ಪರಿಶೀಲಿಸಿ ಭವನ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ಲತಾ ಭರವಸೆ ನೀಡಿದರು. 

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಗುರುವಾರ ಸರ್ಕಾರಿ ನೌಕರರ ದಿನಾಚರಣೆ ಮತ್ತು ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಭೆಯಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್, ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು. 

ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಜನರ ರಕ್ಷಾ ಕವಚಗಳಾಗಿವೆ. ಕಾರ್ಯಾಂಗದ ಅಡಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಸರ್ಕಾರಿ ನೌಕರರು ಪ್ರಜಾಪ್ರಭುತ್ವದ ಭಾಗ. ಸರ್ಕಾರಿ ಉದ್ಯೋಗಿಗಳಿಗೆ ಜೀವನ ಪೂರ್ತಿ ಭದ್ರತೆ ಇದೆ. ನೌಕರರು ಸರ್ಕಾರವು ರೂಪಿಸಿದ ವಿವಿಧ ಯೋಜನೆ ಗಳು, ಸವಲತ್ತುಗಳನ್ನು ಜನರಿಗೆ ಶೇ 100ರಷ್ಟು ತಲುಪಿಸುವಲ್ಲಿ ಬದ್ಧತೆ ಹೊಂದಬೇಕು ಎಂದು ಹೇಳಿದರು. 

ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ 713 ಕಿ.ಮೀ ಉದ್ದದ ರಾಜ ಕಾಲುವೆ ಅಭಿವೃದ್ಧಿ ಮಾಡಲಾಗಿದೆ. ಕಂದಾಯ ಇಲಾಖೆಯಿಂದ ನಿವೇಶನ ರಹಿತರಿಗೆ 45 ಸಾವಿರ ನಿವೇಶನಗಳನ್ನು ಕಲ್ಪಿಸಲಾಗಿದೆ. ಸಕಾಲ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಯು ಮುಂಚೂಣಿಯಲ್ಲಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿ‌ರ್ವಹಣಾಧಿಕಾರಿ ಪಿ. ಶಿವಶಂಕರ್ ಮಾತನಾಡಿ, ಸರ್ಕಾರಿ ನೌಕರರ ಮೇಲೆ ಸಮಾಜವು ಹೆಚ್ಚು ಅವಲಂಬಿತವಾಗಿದೆ. ನೌಕರರು ಬದ್ಧತೆಯಿಂದ ಕಾರ್ಯ ನಿರ್ವಹಿಸಿ, ತಮ್ಮ ವಿಶಿಷ್ಟತೆ ಪ್ರದರ್ಶಿಸಬೇಕು ಎಂದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ. ಹರೀಶ್ ಪ್ರಾಸ್ತಾವಿಕ ಮಾತನಾಡಿದರು.  ನಿವೃತ್ತ ತಹಶೀಲ್ದಾರ್ ಎಸ್. ದ್ವಾರಕೀನಾಥ್ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಅಮರೇಶ್, ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್, ಡಿವೈಎಸ್‌ಪಿ ವಾಸುದೇವ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸರ್ಕಾರಿ ನೌಕರರರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು