ಶಿಡ್ಲಘಟ್ಟ: ಕೋವಿಡ್ 19 ನಿಯಂತ್ರಣಕ್ಕೆ ವಿಧಿಸಿರುವ ನಿರ್ಬಂಧಗಳನ್ನು ಪಾಲಿಸದೇ ಟೌನ್ ಎಸ್‌ಎಫ್‌ಸಿಎಸ್ ಸಂಘದವರು ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ತಹಶೀಲ್ದಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಟ್ಟಣದ ಡಾಲ್ಫಿನ್ ಕಾಲೇಜು ಆವರಣದಲ್ಲಿ ಮೇ 27ರಂದು ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘದಿಂದ (ಎಸ್ಎಫ್‌ಸಿಎಸ್) 42 ಸಂಘಗಳಿಗೆ ₹ 2. 25 ಕೋಟಿ ಬಡ್ಡಿರಹಿತ ಸಾಲ ವಿತರಣೆ ಮಾಡಲಾಗಿತ್ತು. ಸುಮಾರು 500 ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮಕ್ಕೆ ಅನುಮತಿ ಪಡೆಯದಿರುವುದು, ಅಂತರ ಕಾಯ್ದುಕೊಳ್ಳದಿರುವುದು ಹಾಗೂ ಮಾಸ್ಕ್ ಧರಿಸದೇ ಕೋವಿಡ್ 19 ತಡೆಗಟ್ಟಲು ವಿಧಿಸಿರುವ ನಿರ್ಬಂಧಗಳನ್ನು ಪಾಲಿಸದಿರುವ ಬಗ್ಗೆ ಆಯೋಜಕರ ಮೇಲೆ ದೂರು ದಾಖಲಾಗಿದೆ.

ಡಿಸಿಸಿ ಬ್ಯಾಂಕ್‌ನಿಂದ ಸ್ತ್ರೀಶಕ್ತಿ ಸಂಘಗಳಿಗೆ ನೀಡುತ್ತಿರುವ ಬಡ್ಡಿ ರಹಿತ ಸಾಲ ವಿತರಣಾ ಕಾರ್ಯಕ್ರಮವು ತಾಲ್ಲೂಕಿನ ಸಾದಲಿ, ವೈ.ಹುಣಸೇನಹಳ್ಳಿ, ಮಳ್ಳೂರು, ನಗರದ ಡಾಲ್ಫಿನ್ ವಿದ್ಯಾ ಸಂಸ್ಥೆ ಮತ್ತು ಮಳಮಾಚನಹಳ್ಳಿಯಲ್ಲಿ ನಡೆದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.