ಗುಡಿಬಂಡೆ: ಕರ್ನಾಟಕ ರಾಜ್ಯ ಕಾನೂನು ಮತ್ತು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಗುಡಿಬಂಡೆ ಜೆಎಂಎಫ್ಸಿ ಮತ್ತು ಸಿವಿಲ್ ನ್ಯಾಯಾಲಯದಲ್ಲಿ ಲೋಕ ಅದಾಲತ್ ಹಮ್ಮಿಕೊಳ್ಳಲಾಯಿತು.

ನ್ಯಾಯಾಧೀಶ ಹರೀಶ್ ಕೆ.ಎಂ. ನೇತೃತ್ವದಲ್ಲಿ ನಡೆದ ಅದಾಲತ್ನಲ್ಲಿ ಒಟ್ಟಾರೆ 328 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಈ ಪೈಕಿ ಏಳು ಚೆಕ್ ಬೌನ್ಸ್ ಪ್ರಕರಣಗಳಿಂದ ₹13.32 ಲಕ್ಷ ರೂಪಾಯಿ ಸಂದಾಯವಾಯಿತು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ 23 ಪ್ರಕರಣಗಳಲ್ಲಿ 1.03 ಲಕ್ಷ ದಂಡ ವಸೂಲಿ ಆಯಿತು. 12 ಸಿವಿಲ್ ಪ್ರಕರಣಗಳಿಂದ ₹16.15 ಲಕ್ಷ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಲಾಯಿತು.

ಇದೇ ಸಂದರ್ಭದಲ್ಲಿ 273 ಶಾಲಾ ಮಕ್ಕಳಿಗೆ ಜನನ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸಿಗ್ಬತುಲ್ಲಾ, ವಕೀಲರ ಸಂಘದ ಅಧ್ಯಕ್ಷ ಟಿ. ಅಶ್ವತ್ ರೆಡ್ಡಿ, ಉಪಾಧ್ಯಕ್ಷ ಕೆ.ಆರ್ ಮಂಜುನಾಥ್, ಕಾರ್ಯದರ್ಶಿ ಸಿ.ವಿ. ಮಂಜುನಾಥ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ಸಂದೀಪ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.