ಭಾನುವಾರ, ಫೆಬ್ರವರಿ 28, 2021
23 °C

ಲೋಕ ಅದಾಲತ್‌ನಲ್ಲಿ 329 ಪ್ರಕರಣ ಇತ್ಯರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಚಿಕ್ಕಬಳ್ಳಾಪುರ: ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕೈಗೆತ್ತಿಕೊಂಡ 918 ಪ್ರಕರಣಗಳಲ್ಲಿ 329 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿ ₨1.77 ಕೋಟಿ ಇತ್ಯರ್ಥಪಡಿಸಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಎಸ್‌.ಎಚ್‌.ಕೋರಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿದ್ದ ವಿವಿಧ ರೀತಿಯ ಬಾಕಿ ಇದ್ದ ಹಾಲಿ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಯಿತು.

ಅದಾಲತ್‌ನಲ್ಲಿ ನ್ಯಾಯಾಲಯಲ್ಲಿ ವಿಚಾರಣೆ ಹಂತದಲ್ಲಿ ಬಾಕಿ ಇದ್ದ ಬ್ಯಾಂಕ್ ವಸೂಲಾತಿ, ದೌರ್ಜನ್ಯಕ್ಕೀಡಾದ ಸಂತ್ರಸ್ತರಿಗೆ ಪರಿಹಾರ, ವಿದ್ಯುತ್ ಶಕ್ತಿ ಬಿಲ್, ಕಾರ್ಮಿಕ ಇಲಾಖೆ ಪ್ರಕರಣಗಳು, ಭೂ ಒತ್ತುವರಿ, ಕಂದಾಯ ಇಲಾಖೆ, ನೀರು ಸರಬರಾಜು ಬಿಲ್ ಮತ್ತಿತರ 616 ಪ್ರಕರಣಗಳ ವಿಚಾರಣೆ ಕೈಗೆತ್ತಿಕೊಂಡು ಈ ಪೈಕಿ 265 ಪ್ರಕರಣಗಳನ್ನು ಇತ್ಯರ್ಥಪಡಿಸಿ ₨67.93 ಲಕ್ಷ ಬಾಕಿದಾರರಿಗೆ ಪಾವತಿಸುವಂತೆ ಸೂಚಿಸಲಾಯಿತು.

ವ್ಯಾಜ್ಯ ಪೂರ್ವ ಪ್ರಕರಣಗಳ ಪೈಕಿ ಕೈಗೆತ್ತಿಕೊಂಡ 182 ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳಲ್ಲಿ 34 ವಿಲೇವಾರಿ (₨98.53 ಲಕ್ಷ) ಮಾಡಲಾಯಿತು. 50 ವಿದ್ಯುತ್ ಬಿಲ್ ಬಾಕಿ ಪ್ರಕರಣಗಳಲ್ಲಿ 30 ಪ್ರಕರಣಗಳನ್ನು (₨11.03 ಲಕ್ಷ) ಇತ್ಯರ್ಥಪಡಿಸಲಾಯಿತು.

ಈ ವೇಳೆ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾದೀಶ ಎಸ್‌.ಎಚ್‌.ಕೋರಡ್ಡಿ, ‘ಲೋಕ ಅದಾಲತ್‌ ಕಾರ್ಯಕ್ರಮದಲ್ಲಿ ಉಭಯ ಕಕ್ಷಿದಾರರಿಗೆ ಅನುಕೂಲವಾಗುವಂತೆ ನ್ಯಾಯ ಸಮ್ಮತವಾಗಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಜತೆಗೆ ಕಕ್ಷಿದಾರರಿಗೆ ಸಮಯ, ಹಣ ಉಳಿತಾಯ ಆಗಲಿದೆ.ಇದರಿಂದ ನ್ಯಾಯಾಲಯದ ಮೇಲಿನ ಹೊರೆ ಕಡಿಮೆಯಾಗಲಿದೆ. ಕಕ್ಷಿದಾರರು ಶಿಘ್ರವಾಗಿ ಸಮಸ್ಯೆ ಪರಿಹಾರ ಕಂಡುಕೊಳ್ಳುವ ಮೂಲಕ ನೆಮ್ಮದಿ ಜೀವನ ಸಾಗಿಸಬಹುದು’ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಚ್.ದೇವರಾಜ್, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡ, ಉಪಾಧ್ಯಕ್ಷ ಬಾಲಾಜಿ, ಪ್ರಧಾನ ಕಾರ್ಯದರ್ಶಿ ವಿನೋದ್‌ಕುಮಾರ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.