ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕ ಅದಾಲತ್‌: 740 ಪ್ರಕರಣ ಇತ್ಯರ್ಥ

Last Updated 9 ಫೆಬ್ರುವರಿ 2020, 11:58 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ನಡೆದ ವಿಶೇಷ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕೈಗೆತ್ತಿಕೊಂಡ 3,336 ಪ್ರಕರಣಗಳಲ್ಲಿ 740 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿ ₹4.42 ಕೋಟಿ ಇತ್ಯರ್ಥಪಡಿಸಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಕೆ.ಅಮರನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿದ್ದ ವಿವಿಧ ರೀತಿಯ ಬಾಕಿ ಇದ್ದ ಹಾಲಿ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಯಿತು.

ಈ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕೆ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳ ಪ್ರಕರಣಗಳ ವಿಚಾರಣೆ ನಡೆಸಲಾಯಿತು. ವ್ಯಾಜ್ಯ ಪೂರ್ವ 447 ಪ್ರಕರಣಗಳಲ್ಲಿ 56 ಮತ್ತು ಬಾಕಿ ಇರುವ 2,859 ಪ್ರಕರಣಗಳ ಪೈಕಿ 684 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಈ ವೇಳೆ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾದೀಶ ಕೆ.ಅಮರನಾರಾಯಣ, ‘ಲೋಕ ಅದಾಲತ್‌ ಕಾರ್ಯಕ್ರಮದಲ್ಲಿ ಉಭಯ ಕಕ್ಷಿದಾರರಿಗೆ ಅನುಕೂಲವಾಗುವಂತೆ ನ್ಯಾಯ ಸಮ್ಮತವಾಗಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು’ ಎಂದು ಹೇಳಿದರು.

‘ಲೋಕ ಅದಾಲತ್‌ನಿಂದಾಗಿ ಕಕ್ಷಿದಾರರಿಗೆ ಸಮಯ, ಹಣ ಉಳಿತಾಯ ಆಗಲಿದೆ. ಇದರಿಂದ ನ್ಯಾಯಾಲಯದ ಮೇಲಿನ ಹೊರೆ ಕಡಿಮೆಯಾಗಲಿದೆ. ಕಕ್ಷಿದಾರರು ಶಿಘ್ರವಾಗಿ ಸಮಸ್ಯೆ ಪರಿಹಾರ ಕಂಡುಕೊಳ್ಳುವ ಮೂಲಕ ನೆಮ್ಮದಿ ಜೀವನ ಸಾಗಿಸಬಹುದು’ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ದೇವರಾಜು, ಪ್ರಧಾನ ಸಿವಿಲ್ ನ್ಯಾಯಾಧೀಶೆ ರೂಪಾ, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್. ತಮ್ಮೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT