ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಲೋಕಸಭಾ ಕ್ಷೇತ್ರ: ಮನೆಯಿಂದಲೇ ಮತ ಚಲಾಯಿಸಿದ ಹಿರಿಯರು

Published 13 ಏಪ್ರಿಲ್ 2024, 15:47 IST
Last Updated 13 ಏಪ್ರಿಲ್ 2024, 15:47 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮತದಾನ ಆಯ್ಕೆ ಮಾಡಿಕೊಳ್ಳಲಾದ ಹಿರಿಯ ಹಾಗೂ ಅಂಗವಿಕಲ ಮತದಾರರಿಗೆ ಮನೆಯಲ್ಲಿ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. ಶನಿವಾರದಿಂದ ಮತದಾನದ ಪ್ರಕ್ರಿಯೆ ಆರಂಭವಾಗಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಜಾವೀದಾ ನಸೀಮಾ ಖಾನಂ ತಿಳಿಸಿದರು.

ತಾಲ್ಲೂಕು ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಏಪ್ರಿಲ್ 13 ರಿಂದ 18 ವರೆಗೆ ಮನೆಯಿಂದಲೇ ಮತದಾನ ಮಾಡುವ ಕಾರ್ಯ ನಡೆಯಲಿದೆ. ಮತದಾರರು ತಾವು ನೀಡಲಾದ ವಿಳಾಸದಲ್ಲಿ ಹಾಜರಿದ್ದು ಮನೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ 206 ಅಂಗವಿಕಲರು 280 ಹಿರಿಯ ನಾಗರಿಕರು ಮನೆಯಿಂದಲೇ ಮತ ಚಲಾಯಿಸಲು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಶನಿವಾರ 10 ಮಾರ್ಗಗಳಲ್ಲಿ ಮತದಾನದ ಪ್ರಕ್ರಿಯೆ ನಡೆಸಲಾಗಿದೆ. ಭಾನುವಾರ ಶಿಡ್ಲಘಟ್ಟ ನಗರದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುವುದು ಎಂದು ಹೇಳಿದರು.

ತಹಶೀಲ್ದಾರ್ ಬಿ.ಎನ್.ಸ್ವಾಮಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ ಮುನಿರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT