ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೀರೆ, ಹಣಕ್ಕೆ ಮತ ಮಾರಬೇಡಿ: ಎಸ್.ಆನಂದ್

Published 28 ಮಾರ್ಚ್ 2024, 13:38 IST
Last Updated 28 ಮಾರ್ಚ್ 2024, 13:38 IST
ಅಕ್ಷರ ಗಾತ್ರ

ಚಿಂತಾಮಣಿ: ಲಿಕ್ಕರ್, ಕುಕ್ಕರ್, ಸೀರೆ, ಹಣಕ್ಕೆ ಮತ ಮಾರಿಕೊಳ್ಳಬಾರದು. ಪ್ರತಿಯೊಬ್ಬರೂ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಆನಂದ್ ಹೇಳಿದರು.

ತಾಲ್ಲೂಕು ಆಡಳಿತ ಮತ್ತು ಸ್ವೀಪ್ ಸಮಿತಿ ತಾಲ್ಲೂಕಿನ ಯನಮಲಪಾಡಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ನೀಡಲಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬಡವರು, ಸಾಮಾನ್ಯ ಜನರಿಗೆ ಮತದಾನದ ಹಕ್ಕಿರಲಿಲ್ಲ. ಶ್ರೀಮಂತರು, ಜಮೀನ್ದಾರರು, ಉನ್ನತ ಅಧಿಕಾರಿಗಳಿಗೆ ಮಾತ್ರ ಮತದಾನದ ಹಕ್ಕಿತ್ತು. ಪ್ರಜಾಪ್ರಭುತ್ವದಲ್ಲಿ ಅಮೂಲ್ಯವಾದ ಮತದಾನವನ್ನು ಚೆನ್ನಾಗಿ ಯೋಚಿಸಿ ಮಾಡಬೇಕು. ಯೋಗ್ಯ ವ್ಯಕ್ತಿಗಳನ್ನು ಆಯ್ಕೆ ಮಾಡಿದರೆ ದೇಶ, ಪ್ರಜಾಪ್ರಭುತ್ವ ಬಲಿಷ್ಠವಾಗುತ್ತದೆ ಎಂದರು.

ಸಹಾಯಕ ಚುನಾವಣಾಧಿಕಾರಿ ನಟೇಶ್ ಮಾತನಾಡಿದರು. ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಡಿವೈಎಸ್‌ಪಿ ಮುರಳೀಧರ್, ಸರ್ಕಲ್ ಇನ್‌ಸ್ಪೆಕ್ಟರ್ ವೆಂಕಟರವಣಪ್ಪ, ತಹಶೀಲ್ದಾರ್ ಸುದರ್ಶನ ಯಾದವ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT