ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಕೂಡಲೇ ಕಾಂಗ್ರೆಸ್‌ಗೆ ಚಟ್ಟದ ಮೆರವಣಿಗೆ:ವಿಶ್ವನಾಥ್

Published 20 ಏಪ್ರಿಲ್ 2024, 9:22 IST
Last Updated 20 ಏಪ್ರಿಲ್ 2024, 9:22 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಫಲಿತಾಂಶ ಜೂ‌ನ್ 4ರಂದು ಬರಲಿದೆ. ಅಂದು ಚೊಂಬಿಗೆ ಮೂರು ನಾಮವಿಟ್ಟು ಕಾಂಗ್ರೆಸ್‌ಗೆ ಚಟ್ಟದ ಮೆರವಣಿಗೆ ನಡೆಸುತ್ತೇವೆ ಎಂದು ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.

ನಗರದ ಹೊರವಲಯದ ಚೊಕ್ಕಹಳ್ಳಿ ಬಳಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ಈ ಬಾರಿ ಚುನಾವಣೆಯಲ್ಲಿ ಚೊಂಬೇ ಗತಿ. ಇದನ್ನು ಬರೆದಿಟ್ಟುಕೊಳ್ಳಿ ಎಂದರು.

ಆಲೂಗಡ್ಡೆಯಲ್ಲಿ ಚಿನ್ನ ತೆಗೆಯುವ ರಾಹುಲ್ ಗಾಂಧಿ ಪ್ರಧಾನಿ ಆಗುವುದು ಬೇಡ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಳೆದ ಎರಡು ಚುನಾವಣೆಯಲ್ಲಿ ಮೋದಿ ಅವರನ್ನು ವಿರೋಧಿಸಿದರು. ಆದರೆ ಮೋದಿ ಅವರ ಆಡಳಿತ ದೇಶ ಅಗತ್ಯ ಎಂದು ಈ ಬಾರಿ ಬೆಂಬಲ ನೀಡಿದ್ದಾರೆ. ಇದು ರಾಜ್ಯದಲ್ಲಿ ನಮ್ಮ ಶಕ್ತಿಯನ್ನು ಮತ್ತಷ್ಟು ವೃದ್ದಿಗೊಳಿಸಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT