ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.14, ಡಿ.14 ರಂದು ವಿಶೇಷ ಲೋಕ್ ಅದಾಲತ್

Last Updated 20 ಆಗಸ್ಟ್ 2019, 12:14 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ಸಹಯೋಗದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೆಪ್ಟೆಂಬರ್ 14 ಮತ್ತು ಡಿಸೆಂಬರ್ 14 ರಂದು ವಿಶೇಷ ರಾಷ್ಟ್ರೀಯ ಲೋಕ್ ಅದಾಲತ್‌ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಈ ಶಿಬಿರಗಳನ್ನು ನಾಗರಿಕರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಎಸ್.ಎಚ್ ಕೋರಡ್ಡಿ ಹೇಳಿದರು.


ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೆ.14 ರಂದು ನಡೆಯುವ ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಚೆಕ್‌ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕೆ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ’ ಎಂದು ಹೇಳಿದರು.


‘ಡಿಸೆಂಬರ್ 14 ರಂದು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ರಾಜಿಯಾಗಬಲ್ಲ ಪ್ರಕರಣಗಳು, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂದಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣ, ಸಿವಿಲ್‌ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ’ ಎಂದು ತಿಳಿಸಿದರು.


‘ವ್ಯಾಜ್ಯಗಳಿಗಾಗಿ ಜನರು ಕೋರ್ಟ್‌ಗಳಿಗೆ ಅಲೆದಾಡಿ ಹಣ ಮತ್ತು ನೆಮ್ಮದಿ ಕಳೆದುಕೊಳ್ಳುವುದೇ ಹೆಚ್ಚು. ಆ ನಿಟ್ಟಿನಲ್ಲಿ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಪ್ರತಿ ತಿಂಗಳು ಜಿಲ್ಲಾ ನ್ಯಾಯಾಲಯದಲ್ಲಿ ನಿಯಮಿತವಾಗಿ ಲೋಕಅದಾಲತ್‌ ಶಿಬಿರ ಆಯೋಜಿಸುತ್ತ ಬರಲಾಗುತ್ತಿದೆ. ಅಲ್ಲಿ ಜನರು ಉಚಿತವಾಗಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು’ ಎಂದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಚ್.ದೇವರಾಜ್ ಹಾಜರಿದ್ದರು. ಹೆಚ್ಚಿನ ಮಾಹಿತಿ:1800–425–90900.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT