ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ ಕೇಳಿದರೆ ಲೋಕಾಯುಕ್ತಕ್ಕೆ ದೂರು ನೀಡಿ

ಸಾರ್ವಜನಿಕ ದೂರು ಅರ್ಜಿಗಳ ವಿಚಾರಣೆ ನಡೆಸಿದ ಉಪಲೋಕಾಯುಕ್ತರು
Last Updated 8 ನವೆಂಬರ್ 2022, 5:02 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಸಾರ್ವಜನಿಕರು ಯಾವುದೇ ಸರ್ಕಾರಿ ಕೆಲಸಗಳನ್ನು ಮಾಡಿಸಿಕೊಳ್ಳಲು ಆಡಳಿತ ವರ್ಗಕ್ಕೆ ಲಂಚ ಕೊಡಬಾರದು. ಅಧಿಕಾರಿ ಅಥವಾ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟರೆಜಿಲ್ಲಾ ಲೋಕಾಯುಕ್ತ ಕಚೇರಿ ಸಂಪರ್ಕಿಸಿ ದೂರು ಸಲ್ಲಿಸಿ ಎಂದು ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾರ್ವಜನಿಕ ದೂರು ಅರ್ಜಿಗಳ ಸ್ವೀಕಾರ, ಅಹವಾಲುಗಳ ವಿಲೇವಾರಿ ಮತ್ತು ವಿಚಾರಣೆ ಸಭೆಗೂ ಮುನ್ನ ಅವರು ಮಾತನಾಡಿದರು.

ಆಡಳಿತ ವರ್ಗದ ಯಾರೊಬ್ಬರೂ ಲಂಚ ಪಡೆಯದೆ ಕೆಲಸ ನಿರ್ವಹಿಸುವುದೇ ದೇಶಕ್ಕೆ ಮತ್ತು ಸಮಾಜಕ್ಕೆ ನೀಡುವ ಕೊಡುಗೆ. ಈ ದಿಸೆಯಲ್ಲಿ ಎಲ್ಲರೂ ಸಂಕಲ್ಪ ಮಾಡಬೇಕು.ಸಾರ್ವಜನಿಕರು ಯಾವುದೇ ಸರ್ಕಾರಿ ಕೆಲಸಗಳನ್ನು ಮಾಡಿಸಿಕೊಳ್ಳಲು ಯಾವುದೇ ರೂಪದಲ್ಲಿ ಲಂಚ ನೀಡಬಾರದು. ಅದೇ ರೀತಿ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ರೂಪದಲ್ಲಿ ಲಂಚ ಪಡೆಯದೆ ಪ್ರಾಮಾಣಿಕತೆ ಮೆರೆಯಬೇಕು ಎಂದರು.

ಲಂಚಕ್ಕೆ ಬೇಡಿಕೆ ಇಟ್ಟಿದ್ದರೆ ಹಾಗೂ ಆಮಿಷಗಳನ್ನು ಬಯಸಿದ್ದರೆ ಅಂತಹವರ ವಿರುದ್ಧ ಜಿಲ್ಲಾ ಲೋಕಾಯುಕ್ತ ಅಧೀಕ್ಷಕರ ಕಚೇರಿಗೆ ದೂರು ಸಲ್ಲಿಸಬಹುದು. ಲೋಕಾಯುಕ್ತ ಸಂಸ್ಥೆಯು ಕಾನೂನು ಪ್ರಕ್ರಿಯೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸುತ್ತದೆ. ನೊಂದವರು ನಿರ್ಭಿತಿಯಿಂದ ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಲು ಮುಂದಾಗಬೇಕು. ಸಂಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇಡಬೇಕು. ನೊಂದವರ, ಅನ್ಯಾಯಕ್ಕೆ ಒಳಗಾದವರ ಬೆಂಬಲಕ್ಕೆ ಸಂಸ್ಥೆ ದೃಢವಾಗಿ ನಿಲ್ಲುತ್ತದೆ. ಈ ಬಗ್ಗೆ ಸಂಶಯ ಬೇಡ ಎಂದು
ತಿಳಿಸಿದರು.

ಲೋಕಾಯುಕ್ತ ಹೆಚ್ಚುವರಿ ನಿಬಂಧಕ ಅಮ್ಮನಬಾವಿ, ಉಪನಿಬಂಧಕ ಚನ್ನಕೇಶವರೆಡ್ಡಿ, ಸಹಾಯಕ ನಿಬಂಧಕ ಸಿ.ಚಂದ್ರಶೇಖರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪಿ.ಶಿವಶಂಕರ್, ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT