ಚಿಕ್ಕಬಳ್ಳಾಪುರ: ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯ ಕಟ್ಟಡದಲ್ಲಿ ಗುರುವಾರ ಲೋಕಾಯುಕ್ತ ಎಸ್‌ಪಿ ಪವನ್ ನೆಜ್ಜೂರು ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಗುತ್ತಿಗೆದಾರರ ಕುಂದುಕೊರತೆ ಸಭೆ ನಡೆಸಿದರು.

ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಸದಸ್ಯರು, ಬೆಸ್ಕಾಂ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರು, ವೈದ್ಯಕೀಯ ಸೌಲಭ್ಯಗಳ ಗುತ್ತಿಗೆದಾರರು, ಸಣ್ಣ ನೀರಾವರಿ ಇಲಾಖೆ, ಕಲ್ಲುಗಣಿಗಾರಿಕೆ ಸೇರಿದಂತೆ ವಿವಿಧ ಸಂಸ್ಥೆಗಳ ಪದಾಧಿಕಾರಿಗಳು, ಗುತ್ತಿಗೆದಾರರು ಸಹ ಸಭೆಯಲ್ಲಿ ಪಾಲ್ಗೊಂಡು ತಮಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

‘ಸಭೆಯಲ್ಲಿ ಹಲವು ವಿಷಯಗಳು ಗಮನಕ್ಕೆ ಬಂದಿವೆ. ಮತ್ತೊಂದು ಹಂತದಲ್ಲಿ ಈ ಇಲಾಖೆಗಳ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಭೆ ನಡೆಸಲಾಗುವುದು’ ಎಂದು ಲೋಕಾಯುಕ್ತ ಎಸ್‌ಪಿ ಪವನ್ ನೆಜ್ಜೂರ್ ತಿಳಿಸಿದರು.

‘ಬೆಸ್ಕಾಂ, ಅರಣ್ಯ, ಲೋಕೋಪಯೋಗಿ ಸೇರಿದಂತೆ ಕೆಲವು ಇಲಾಖೆಗಳ ಗುತ್ತಿಗೆದಾರರು ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ. ನಿಮ್ಮ ವ್ಯವಹಾರಗಳಲ್ಲಿ ತೊಂದರೆ ಆಗಿದ್ದರೆ ತಿಳಿಸಿ ಎಂದು ಹೇಳಿದ್ದೆವು. ಆ ಪ್ರಕಾರ ಮಾಹಿತಿ ನೀಡಿದ್ದಾರೆ. ಕೆಲವು ಸಮಸ್ಯೆಗಳು ಲೋಕಾಯುಕ್ತ ಕಾಯ್ದೆಯಿಂದ ಹೊರಗಿವೆ. ನೀತಿ ನಿಯಮಗಳಿಗೆ ಸಂಬಂಧಿಸಿದ ಆ ಸಮಸ್ಯೆಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ನಮ್ಮ ವ್ಯಾಪ್ತಿಗೆ ಬರುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದರು.

ಲೋಕಾಯುಕ್ತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.