ಬುಧವಾರ, ನವೆಂಬರ್ 25, 2020
20 °C

ಉತ್ತಮ ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ನಗರದ ಸರ್ಕಾರಿ ಮಹಿಳಾ ಕಾಲೇಜಿನ ಸ್ನಾತಕೋತ್ತರ(ಎಂ.ಎ) ಇತಿಹಾಸ ವಿಭಾಗಕ್ಕೆ ಸತತ 3ನೇ ಬಾರಿಗೆ ಶೇಕಡ 100ರಷ್ಟು ಫಲಿತಾಂಶ ಬಂದಿದೆ ಎಂದು ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಎಂ.ಎನ್. ರಘು ತಿಳಿಸಿದ್ದಾರೆ.

ವಿಭಾಗದಲ್ಲಿ 13 ಮಂದಿ ಪರೀಕ್ಷೆ ಬರೆದಿದ್ದು, 11 ಮಂದಿ ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ ಇಬ್ಬರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉತ್ತಮ ಫಲಿತಾಂಶ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ತಿಳಿಸಿದ್ದಾರೆ. 

‘ಸರ್ಕಾರಿ ಮಹಿಳಾ ಕಾಲೇಜು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪ್ರತಿವರ್ಷ ಉತ್ತಮ ಫಲಿತಾಂಶದ ದಾಖಲೆ ಹೊಂದಿದೆ. ಇತಿಹಾಸ ವಿಭಾಗದ ಎಲ್ಲ ಪ್ರಾಧ್ಯಾಪಕರು ಮತ್ತು ಸಿಬ್ಬಂದಿಯ ಪರಿಶ್ರಮ ಹಾಗೂ ವಿದ್ಯಾರ್ಥಿನಿಯರ ಸತತ ಅಭ್ಯಾಸದಿಂದ ಈ ಸಾಧನೆ ಸಾಧ್ಯವಾಗಿದೆ’ ಎಂದು ಪ್ರಾಂಶುಪಾಲ ಪ್ರೊ.ಕೆ.ಆರ್. ಶಿವಶಂಕರ ಪ್ರಸಾದ್ ಮೆಚ್ಚುಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು