ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾಶಿವರಾತ್ರಿ: ಈಶಾ ಯೋಗ ಕೇಂದ್ರಕ್ಕೆ ಭಕ್ತರ ದಂಡು

Published 8 ಮಾರ್ಚ್ 2024, 21:55 IST
Last Updated 8 ಮಾರ್ಚ್ 2024, 21:55 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:  ತಾಲ್ಲೂಕಿನ ಅಗಲಗುರ್ಕಿಯ ಈಶ ಯೋಗ ಕೇಂದ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದರು. ಕೊಯಮತ್ತೂರಿನ ಈಶ ಯೋಗಕೇಂದ್ರದಲ್ಲಿ ನಡೆದ ಮಹಾಶಿವರಾತ್ರಿ ಆಚರಣೆಯು ನೇರ ಪ್ರಸಾರವನ್ನು ರಾತ್ರಿ ಸೇರಿದ್ದ ಭಕ್ತರು ಕಣ್ತುಂಬಿಕೊಂಡರು. ರಾಸುಗಳ ಪ್ರದರ್ಶನವೂ ಇತ್ತು. ಅಪಾರ ಸಂಖ್ಯೆಯಲ್ಲಿ ಬಂದ ಜನರು ವಿವಿಧ ತಳಿಗಳ ರಾಸುಗಳನ್ನು ಕಣ್ತುಂಬಿಕೊಂಡರು.

ಬಿಎಂಟಿಸಿಯು ಬೆಂಗಳೂರಿನಿಂದ ನಂದಿ, ರಂಗಸ್ಥಳ ಮತ್ತು ಈಶಾ ಯೋಗ ಕೇಂದ್ರಕ್ಕೆ ವಿಶೇಷ ಪ್ರವಾಸದ ಪ್ಯಾಕೇಜ್ ನೀಡಿತ್ತು. 100 ಬಿಎಂಟಿಸಿ ಬಸ್‌ಗಳು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದ ನಡುವೆ ಸಂಚರಿಸಿವು. 

ರಾತ್ರಿಯ ನಡೆದ ಕಾರ್ಯಕ್ರಮಗಳನ್ನು ನೋಡಲು ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಯ ಭಕ್ತರು ಯೋಗ ಕೇಂದ್ರಕ್ಕೆ ಬಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT