ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ ಗೌಡ ಮಾತನಾಡಿ, ‘ನನ್ನ ಜೀವನವೇ ನನ್ನ ಸಂದೇಶ ಎಂದಿದ್ದ ಮಹಾತ್ಮ ಗಾಂಧಿ ಒಂದು ಶಕ್ತಿ. ತಮ್ಮ ಜೀವನದುದ್ದಕ್ಕೂ ಸತ್ಯ, ಸಮಾನತೆ, ಶಾಂತಿ, ಅಹಿಂಸೆ, ಜಾತ್ಯಾತೀತತೆ, ಅಸ್ಪೃಶ್ಯತೆ ನಿವಾರಣೆ, ಶ್ರಮದಾನ, ಸ್ವಚ್ಛತೆಯ ಮಹತ್ವವನ್ನೇ ಉಸಿರಾಡಿದ್ದ ಮಹಾತ್ಮ ಸ್ವಾತಂತ್ರ್ಯಕ್ಕಾಗಿ ಸವೆಸಿದ ಹಾದಿ ಇಂದಿನ ಪೀಳಿಗೆಗೆ ಆದರ್ಶ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ದೂರದೃಷ್ಟಿತ್ವ ಮತ್ತು ಮಾರ್ಗದರ್ಶನ ನೀಡಿ ಸ್ವಾವಲಂಬಿ ರಾಷ್ಟ್ರದ ಕನಸನ್ನು ಪ್ರತಿಪಾದಿಸಿದ್ದರು’ ಎಂದು ಹೇಳಿದರು.